ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಮಹಿಳಾ ಮೀಸಲಾತಿ ಸ್ವಾಗತಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.
ಮಹಿಳಾ ಮೀಸಲಾತಿ ಕುರಿತು ಸಂಸತ್‌ನ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯುತ್ತಿದೆ. ಇದಕ್ಕೂ ಮೊದಲು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, `ದೇಶವು ಮಹಿಳೆಯರ ಸಬಲೀಕರಣದಲ್ಲಿ ಐತಿಹಾಸಿಕ ಹೆಜ್ಜೆ ಇಡಲು ಸಜ್ಜಾಗಿದೆ' ಎಂದು ತಿಳಿಸಿದ್ದಾರೆ.
ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ನಮ್ಮ ದೇಶವು ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ ಇಡಲಿದೆ. ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ನೀಡುವ ಗೌರವವು ರಾಷ್ಟ್ರಕ್ಕೆ...