LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಜಗದ ಕವಿ, ಯುಗದ ಕವಿ ಕುವೆಂಪು : ಶಾಸಕ ಸಿ. ಪುಟ್ಟರಂಗಶೆಟ್ಟಿ ಅಭಿಮತ

ಚಾಮರಾಜನಗರ: ಇಡೀ ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರು ಜಗದ ಕವಿ, ಯುಗದ ಕವಿಯಾಗಿದ್ದಾರೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಆಭಿಮತ ವ್ಯಕ್ತಪಡಿಸಿದರು.ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ಡಾ. ರಾಜ್‍ಕುಮಾರ್ ಕಲಾ ಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ವಿಶ್ವಮಾನವ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ರವಿ ಕಾಣದ್ದನ್ನು ಕವಿ ಕಂಡ ಎಂಬಂತೆ ಕುವೆಂಪುರವರು ರಚಿಸಿರುವ ಎಲ್ಲಾ ಪ್ರಕಾರಗಳ ಕಾವ್ಯಗಳಲ್ಲಿ ಮಾನವೀಯತೆಯ ಸಂದೇಶವಿದೆ. ಅವರ ಸಂದೇಶಗಳನ್ನು ನಾವೆಲ್ಲರೂ ಅರಿಯಬೇಕು. ಭಾರತಮಾತೆಯ ಮಗನಾಗಿ ಹುಟ್ಟಿ ಇಡೀ ಮನುಕುಲಕ್ಕೆ ವಿಶ್ವಮಾನವ ಸಂದೇಶಗಳನ್ನು ಸಾರಿದ ಕುವೆಂಪು ಅವರ ಸ್ಮರಣೆ ಇಂದಿಗೂ ಪ್ರಸ್ತುತವಾಗಿವೆ ಎಂದು ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಕನ್ನಡಕ್ಕೆ ಮೊಟ್ಟ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಕುವೆಂಪು ಅವರದ್ದು. ನವ್ಯ ಸಾಹಿತ್ಯದಲ್ಲಿ ಕಾವ್ಯ ರಚಿಸಿದ ಕುವೆಂಪು ಅವರು ನಮಗೆ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ. ಕುವೆಂಪುರವರ ಸಾಹಿತ್ಯ ಎಂದೆಂದಿಗೂ ಅನಂತ, ಅನಂತವಾಗಿರಲಿದೆ. ಸಮಾನತೆಯಡಿ ವಿಶ್ವವನ್ನೇ ಒಂದು ಕುಟುಂಬವಾಗಿ ನೋಡಿದ ಕುವೆಂಪು ಚಿರಸ್ಮರಣೀಯರಾಗಿದ್ದಾರೆ ಎಂದರು.

ಮುಖ್ಯ ಭಾಷಣ ಮಾಡಿದ ಸಾಹಿತಿ ಹಾಗೂ ಅಂಕಣಕಾರರಾದ ಬನ್ನೂರು ಕೆ. ರಾಜು ಅವರು ಮಾತನಾಡಿ 10ನೇ ಶತಮಾನದಲ್ಲಿ ಕನ್ನಡದ ಆದಿಕವಿ ಪಂಪನ ‘ಮನುಷ್ಯ ಜಾತಿ ತಾನೊಂದೇ ವಲಂ’ ತತ್ವದ ಆಧಾರದಲ್ಲಿ ವಿಶ್ವಮಾನವ ಸಂದೇಶ ನೀಡಿದರು. ಮನುಷ್ಯತ್ವ ನಮ್ಮೊಳಗಿದ್ದರೆ ಮಾತ್ರ ಎಲ್ಲರೂ ಮನುಷ್ಯರಾಗಲು ಸಾಧ್ಯ. ಪಂಪ ಹಾಗೂ ಕುವೆಂಪು ಮಾನವತೆಯ ಎರಡು ಮುಖಗಳಾಗಿದ್ದಾರೆ. ಕುವೆಂಪು ಅವರು ಬುದ್ಧ, ಬಸವ, ಅಂಬೇಡ್ಕರ್, ಮಹಾವೀರ ಅವರ ಅದರ್ಶಗಳನ್ನು ಮೈಗೂಡಿಸಿಕೊಂಡು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದವರಾಗಿದ್ದಾರೆ ಎಂದರು.

ಕುವೆಂಪು ಅವರು ವಿದ್ಯಾರ್ಥಿದೆಸೆ ಯಲ್ಲಿ ಆಂಗ್ಲಭಾಷೆಯ ಸಾಕಷ್ಟು ಕವಿತೆಗಳನ್ನು ಮನನ ಮಾಡಿಕೊಂಡು ಸಾಹಿತ್ಯ ರಚನೆಯನ್ನು ಇಂಗ್ಲೀಷ್‍ನಲ್ಲಿ ಆರಂಭಿಸಿದ್ದರು. ಆ ಸಂದರ್ಭದಲ್ಲಿ ಕುವೆಂಪು ಗುರುಗಳಾದ ಐರಿಸ್ ಕವಿ ಜೇಮ್ಸ್ ಕಸೀನ್ ಅವರು ತಾಯಿ ಭಾಷೆಗೆ ಅಗಾಧ ಶಕ್ತಿ ಇದೆ. ಮಾತೃಭಾಷೆ ಕನ್ನಡದಲ್ಲಿಯೇ ಕಾವ್ಯ ರಚಿಸುವಂತೆ ಸಲಹೆ ಮಾಡಿದರು. ಅಂದಿನಿಂದ ಕುವೆಂಪು ಬರೆದ ಸಾಹಿತ್ಯವೆಲ್ಲಾ ಅಮೃತವೇ. ಅಮೃತ ಎಂದರೇ ಸಾವಿಲ್ಲದ್ದು ಎಂದರ್ಥ. ಜನರಲ್ಲಿದ್ದ ಮೌಢ್ಯಗಳನ್ನು ಹೋಗಲಾಡಿಸಲು ಅಕ್ಷರಗಳ ಮೂಲಕ ಮಾನವೀಯ ಸಮಾಜ ಕಟ್ಟಿದ ಕುವೆಂಪು ವೈಚಾರಿಕಾ, ವೈಜ್ಞಾನಿಕ ಪ್ರಜ್ಞೆಯನ್ನು ಜಾಗೃತಗೊಳಿಸಿದರು ಎಂದು ತಿಳಿಸಿದರು.

ಪ್ರತಿಯೊಬ್ಬರು ಮಗುವಿನ ರೂಪದಲ್ಲಿ ವಿಶ್ವಮಾನವರಾಗಿ ಹುಟ್ಟುತ್ತಾರೆ. ಬೆಳೆಯುತ್ತ ಅಲ್ಪ ಮಾನವರಾಗುತ್ತಾರೆ. ಅವರನ್ನು ನೈತಿಕತೆ ಮತ್ತು ಮಾದರಿ ವ್ಯಕ್ತಿತ್ವದ ಮೂಲಕ ಮತ್ತೆ ವಿಶ್ವಮಾನವತ್ವದೆಡೆಗೆ ಕೊಂಡೊಯ್ಯುವ ಅಗತ್ಯವಿದೆ. ವಿದ್ವತ್ತಿನ ಗುಪ್ತಗಾಮಿನಿಯಾಗಿದ್ದ ಕುವೆಂಪುರವರು ಪ್ರಕೃತಿಪ್ರೇಮಿಯೂ ಆಗಿದ್ದರು. ಮಹಾನ್ ಸ್ವಾಭಿಮಾನಿ ಕುವೆಂಪು ಅವರು ತಾತ್ವಿಕ ಹಾಗೂ ಸೈದ್ದಾಂತಿಕ ನೆಲೆಗಟ್ಟಿನಲ್ಲಿ ಸಾಹಿತ್ಯ ರಚಿಸಿದ ಸಾಹಿತ್ಯ ಕೃತಿಗಳಲ್ಲಿ ಪ್ರಕೃತಿ ಆರಾಧನೆಯನ್ನು ಕಾಣಬಹುದಾಗಿದೆ.

ಕುವೆಂಪು ಕವಿ ಮಾತ್ರವಲ್ಲದೆ ಸ್ವಾತಂತ್ರ್ಯ ಹೋರಾಟಗಾರರು ಹೌದು. ಹಲವಾರು ಹೋರಾಟ ಗೀತೆಗಳನ್ನು ರಚಿಸಿ ಜನರಲ್ಲಿ ಸ್ವಾತಂತ್ರ್ಯ ಕಿಚ್ಚು ತುಂಬಿದರು. ರೈತರನ್ನು ನೇಗಿಲ ಯೋಗಿಯಾಗಿ ಕಂಡು ಸರ್ವಜನಾಂಗದ ಶಾಂತಿಯ ತೋಟದಲ್ಲಿ ಸಾಹಿತ್ಯದ ಮೂಲಕ ಕೃಷಿ ಮಾಡಿದರು ಎಂದು ಬನ್ನೂರು ಕೆ. ರಾಜು ಅಭಿಪ್ರಾಯಪಟ್ಟರು.ನಗರಸಭಾ ಸದಸ್ಯರಾದ ಎಚ್.ಎಸ್. ಮಮತ ಅವರು ಕಾರ್ಯಕ್ರಮದಲ್ಲಿ ಕುವೆಂಪು ಅವರ ಜನ್ಮ ದಿನದ ಶುಭಾಷಯಗಳನ್ನು ತಿಳಿಸಿ ಅವರ ವಿಶ್ವಮಾನವ ಸಂದೇಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಅವರ ಹಾದಿಯಲ್ಲಿ ಮುನ್ನೆಡೆಯಬೇಕು ಎಂದರು.

ಇದೇ ವೇಳೆ ರಾಷ್ಟ್ರಕವಿ ಕುವೆಂಪು ಜಯಂತಿ ಅಂಗವಾಗಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸ್ಮರಣಿಕೆ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ತಹಶೀಲ್ದಾರ್ ಬಸವರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ಕನ್ನಡ ಪರ ಸಂಘಟನೆಯ ಮುಖಂಡರಾದ ಶ್ರೀನಿವಾಸಗೌಡ, ಇತರರು ಕಾರ್ಯಕ್ರ ಮದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು