LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜಕಾರಣದ ಅಧ್ಯಯನ ಬಿಜೆಪಿ ಬರ ಅಧ್ಯಯನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ವತಿಯಿಂದ ನಡೆಸುತ್ತಿರುವ ಬರ ಅಧ್ಯಯನ ರಾಜಕೀಯದಿಂದ ಕೂಡಿದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮಾಡುತ್ತಿರುವ ಬರ ಅಧ್ಯಯನ ರಾಜಕಾರಣಕ್ಕಾಗಿ ಮಾಡಲಾಗುತ್ತಿದೆ ಎಂದಿರುವರ ಅವರು, ಅವರು ಬರ ಅಧ್ಯಯನ ಮಾಡಲಿ,ಇದಕ್ಕೆ ನಮ್ಮ ತಕರಾರು ಏನು ಇಲ್ಲ. ಈಗಾಗಲೇ ಕೇಂದ್ರದಿಂದ ಬರ ಅಧ್ಯಯನ ತಂಡ ಬಂದು ಬರ ಅಧ್ಯಯನ ಮಾಡಿ ಹೋಗಿದೆ.

ಆದರೆ ವರದಿ ಕೊಟ್ಟಿಲ್ಲ. ರಾಜ್ಯಸರ್ಕಾರದಿಂದಲೂ ಬರ ಅಧ್ಯಯನ ನಡೆಸಿ ಪರಿಹಾರಕ್ಕೆ ಕೋರಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. 13900 ಕೋಟಿ ಪರಿಹಾರ ಮಂಜೂರು ಮಾಡುವಂತೆ ಪತ್ರ ಬರೆಯಲಾಗಿದೆ. ಆದರೆ ಇದ್ಯಾವುದಕ್ಕೂ ಕೇಂದ್ರ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಿಲ್ಲ. ರಾಜ್ಯದಲ್ಲಿ ಒಟ್ಟು 33ಸಾವಿರದ 700 ಕೋಟಿ ರೂ.ನಷ್ಟು ನಷ್ಟ ಸಂಭವಿಸಿದೆ.

ರಾಜ್ಯದ 25 ಸಂಸದರರು ಹೋಗಿ ಕೇಂದ್ರ ಸರ್ಕಾರದ ಮುಂದೆ ಪರಿಹಾರಕ್ಕೆ ಮನವಿ ಮಾಡಲಿ ಇವರಿಗೆ ರಾಜ್ಯ ಹಾಗು ರಾಜ್ಯದ ರೈತರ ಬಗ್ಗೆ ನಿಜವಾದ ಕಾಳಜಿಯಿದ್ದರೆ ಕೇಂದ್ರದ ಮುಂದೆ ಹೋಗಿ ಪರಿಹಾರಕ್ಕಾಗಿ ಒತ್ತಾಯಿಸಿ ಪರಿಹಾರ ಮಂಜೂರು ಮಾಡಸಿಲಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಬರ ಅಧ್ಯಯನ ವೈಜ್ಞಾನಿಕ ಮಾದರಿಯಲ್ಲಿ ನಡೆದಿಲ್ಲ ಎಂದು ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ, ಬರ ಅಧ್ಯಯನ ಮಾಡಿರುವವರು ಕೇಂದ್ರ ತಂಡ ಅವರನ್ನು ಕೇಳಲಿ ನಮ್ಮ ರಾಜ್ಯದ ಮಂತ್ರಿಗಳು ಹೋಗಿ ಕೇಂದ್ರದ ಸಂಬಂಧಪಟ್ಟ ಮಂತ್ರಿಗಳ ಭೇಟಿಗೆ ಅನುಮತಿ ಕೇಳಿದರೂ ಅನುಮತಿ ನೀಡಿಲ್ಲ ಎಂದು ಮುಖ್ಯಮಂತ್ರಿಯವರು ಇದೇ ಸಂದರ್ಭದಲ್ಲಿ ದೂರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು