LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕಲ್ಯಾಣ ಕರ್ನಾಟಕಕ್ಕೆ ಖರ್ಗೆಯವರಿಂದ ಶಕ್ತಿ

ಕಲಬುರಗಿ: "ಎರಡನೇ ಹಂತದ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಐದು ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದು, ಈ ಐದೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ಈ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಕೊಟ್ಟಿರುವ ಕೊಡುಗೆ ಬಗ್ಗೆ ಜನರಿಗೆ ಅರಿವಿದೆ. ಅವರ ಸೋಲಿಗೆ ನಾವೆಲ್ಲಾ ಪಶ್ಚಾತಾಪ ಪಟ್ಟಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಅವರ ಸೇವೆಗೆ ಈ ಭಾಗದ ಜನ ಉಪಕಾರ ಸ್ಮರಣೆ ಮಾಡಲಿದ್ದಾರೆ.ಶೋಷಿತ ವರ್ಗದವರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಕ್ತಿ ತುಂಬಿದಂತೆ, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಶಕ್ತಿ ನೀಡಿದ್ದಾರೆ.
ಬಾಬುರಾವ್ ಚಿಂಚನಸೂರ್, ಸವದಿ, ಮಾಲಿಕಯ್ಯ ಗುತ್ತೇದಾರ್ ಅವರು ನಮ್ಮ ಪಕ್ಷಕ್ಕೆ ಮರಳಿದ್ದಾರೆ.

ಇವರ ಜತೆಗೆ ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ. ಇನ್ನು 93% ನಷ್ಟು ಜನ ನಮ್ಮ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಬಿಜೆಪಿ ಮಹಿಳೆಯರಿಗೆ,ಕಾರ್ಯಕರ್ತರಿಗೆ ಚೊಂಬು ನೀಡಿದೇ. ಕಾಂಗ್ರೆಸ್ ಪಕ್ಷದ ಯೋಜನೆಗಳಿಂದ ಬದುಕು ಸಾಗಿಸಲು ನೆರವಾಗಿದೆ ಎಂದು ಮನವರಿಕೆಯಾಗಿದೆ. ಹೀಗಾಗಿ ಈ ಭಾಗದಲ್ಲಿ ಜನ ಬಹಳ ಉತ್ಸಾಹದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ."

ಇನ್ನು ಸುರಪುರ ಉಪಚುನಾವಣೆ ಬಗ್ಗೆ ಕೇಳಿದಾಗ, "ಕಳೆದ ಚುನಾವಣೆ ಬಳಿಕ ಬಿಜೆಪಿ ಅಭ್ಯರ್ಥಿ ತಮ್ಮ ಕಾರ್ಯಕರ್ತರಿಗೆ 2 ವರ್ಷ ನಾನು ಇರುವುದಿಲ್ಲ, ಯಾರೂ ಮನೆಕಡೆ ಬರಬೇಡಿ ಎಂದು ಹೇಳಿದ್ದರು. ಇನ್ನು ಅವರ ಕಾರ್ಯಕರ್ತರೂ ಕೂಡ ನಮ್ಮ ಪಾಲಿಕೆ ಚುನಾವಣೆ ಸಮಯದಲ್ಲಿ ಅವರೇ ನಮ್ಮ ಜೊತೆ ಇರಲಿಲ್ಲ. ಈಗ ನಾವು ಯಾಕೆ ಅವರ ಪರ ಚುನಾವಣೆ ಮಾಡಬೇಕು ಎಂದು ಸುಮ್ಮನಿದ್ದಾರೆ. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಾತಾವರಣವಿದೆ" ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು