LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

15ರಂದು ಬೆಂಗಳೂರಿಗೆ ಪ್ರಜ್ವಲ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದು, ಪೆನ್‍ಡ್ರೈವ್ ಪುರಾಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಎಸ್‍ಐಟಿ ತನಿಖೆ ಚುರುಕುಗೊಳಿಸಿದೆ.

ಇದರ ಮಧ್ಯೆ ನಾಳೆ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಮರಳಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಮೇ 15 ರ ಮಧ್ಯರಾತ್ರಿ ಬೆಂಗಳೂರಿಗೆ ಬರಲು ಎರಡನೇ ಟಿಕೆಟ್ ಬುಕ್ಕಿಂಗ್ ಮಾಡಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣ ನಾಳೆ ರಾಜ್ಯಕ್ಕೆ ಆಗಮಿಸುವುದು ಅನುಮಾನ ಎನ್ನಲಾಗುತ್ತಿದೆ.

ಮೇ 15ರಂದು ಮಧ್ಯರಾತ್ರಿ 2 ಗಂಟೆಗೆ ಲುಫ್ತಾನ್ಸಾ ವಿಮಾನದಲ್ಲಿ ಫ್ರಾಂಕ್‍ಫರ್ಟ್‍ನಿಂದ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ಕಿಂಗ್ ಮಾಡಲಾಗಿದ್ದು, ಮೇ 16 ರ ಮುಂಜಾನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST