ಬೆಂಗಳೂರು: ಖ್ಯಾತ ನಟ ಪ್ರಕಾಶ್ ರೈ ಅವರ ವೋಟನ್ನು ಸಹ ಎಸ್‌ಐಆರ್ ಪ್ರಕ್ರಿಯೆ ಅಡಿಯಲ್ಲಿ ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಖುದ್ದು ಪ್ರಕಾಶ್ ರೈ ಮಾಹಿತಿ ಹಂಚಿಕೊಂಡಿದ್ದಾರೆ.ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊAಡಿರುವ ನಟ ಪ್ರಕಾಶ್ ರೈ, `ಎಸ್‌ಐಆರ್ ಕಾರಣಕ್ಕೆ ಬೆಂಗಳೂರಿನಿಂದ ಡಿಲೀಟ್ ಆಗಿರುವ 65 ಲಕ್ಷ ಮತದಾರರಲ್ಲಿ ನಾನೂ ಸಹ ಒಬ್ಬ. ನಾನು ಹುಟ್ಟಿ, ಬೆಳೆದ ಕ್ಷೇತ್ರದಿಂದಲೇ ನನ್ನ ಮತವನ್ನು ತೆಗೆದು ಹಾಕಲಾಗಿದೆ. ನಾನು ಅದೇ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸಹ ಸ್ಪರ್ಧಿಸಿದ್ದೆ. ಆದರೂ ಸಹ ನನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇದು ಜೋಕ್ ಅಲ್ಲದೆ ಮತ್ತೇನು?' ಎಂದು ಪ್ರಕಾಶ್ ರೈ ಪ್ರಶ್ನೆ ಮಾಡಿದ್ದಾರೆ. 2024 ರಲ್ಲಿ ಅವರು ಬೆಂಗಳೂರು ಸೆಂಟ್ರಲ್ ಕ್ಷೇತ್ರದ, ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್‌ನಲ್ಲಿ ಮತದಾನ ಸಹ ಮಾಡಿದರು. ಆದರೆ ಪ್ರಕಾಶ್ ರೈ ಅವರು ಒಂದಕ್ಕಿAತಲೂ ಹೆಚ್ಚು ಕ್ಷೇತ್ರಗಳಲ್ಲಿ ಮತದಾನದ ಹಕ್ಕನ್ನು ಹೊಂದಿದ್ದಾರೆ ಎಂದು ಕೆಲ ವರ್ಷಗಳ ಹಿಂದೆಯೇ ದೂರು ದಾಖಲಾಗಿತ್ತು.