LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಚುನಾವಣೆಯಿಂದ ಹಿಂದೆ ಸರಿದ ಪ್ರಶಾಂತ್ ಕಿಶೋರ್"

ಪಾಟ್ನಾ: ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಆಗಿರುವ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಇದ್ದಕ್ಕಿದ್ದಂತೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಆರ್‌ಜೆಡಿ ಮುಖ್ಯಸ್ಥ, ವಿಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು
ಹೇಳಲಾಗಿತ್ತು. ಆದರೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಪ್ರಶಾತ್ ಕಿಶೋರ್ ಅವರ ನಿರ್ಧಾರ ಅಚ್ಚರಿ ಮೂಡಿಸಿದೆ.

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬದಲಾಗಿ, ಪಕ್ಷದ ಸಂಘಟನಾ ಕಾರ್ಯಗಳಲ್ಲಿ ತಮ್ಮನ್ನ ತೊಡಗಿಸಿಕೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಾನು ಈ ಬಾರಿ ಬಿಹಾರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಇದು ಪಕ್ಷದ ನಿರ್ಧಾರ. ಪಕ್ಷದ ಬೃಹತ್ಹಿ ತಾಸಕ್ತಿಗಾಗಿ ನಾನು ನನ್ನ ಸಂಘಟನಾ ಕಾರ್ಯವನ್ನು ಮುಂದುವರಿಸುತ್ತೇನೆ.

ಜನ್ ಸುರಾಜ್ ಪಕ್ಷವು ೧೫೦ಕ್ಕೂ ಹೆಚ್ಚು ಸ್ಥಾನಗಳನ್ನ ಪಡೆದರೆ, ಅದು ಬಿಹಾರದ ಜನರ ನಿಜವಾದ ಗೆಲುವಾಗಲಿದೆ. ೧೫೦ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆದ್ದರೆ ಅದು ತಮಗೆ ವೈಯಕ್ತಿಕ ಸೋಲು ಎಂದು ಅಭಿಪ್ರಾಯಪಟ್ಟಿದ್ದಾರೆ. ಜನ್ ಸುರಾಜ್ ಅಧಿಕಾರಕ್ಕೆ ಬರಬಾರದೆಂದು ಪ್ರಾರ್ಥಿಸುತ್ತಿರುವ ನಾಯಕರು ಮತ್ತು ಅಧಿಕಾರಿಗಳಿಗೆ ಇದೊಂದು ಎಚ್ಚರಿಕೆ. ನಾವು ಸರ್ಕಾರ ರಚಿಸಿದರೆ ಅವರ ಕೆಟ್ಟ ದಿನಗಳು ಆರಂಭವಾಗಲಿವೆ. ಇದು ಅವರಿಗೂ ಚೆನ್ನಾಗಿ ತಿಳಿದಿದೆ. ತಮ್ಮ ಪಕ್ಷ
ಅಧಿಕಾರಕ್ಕೆ ಬಂದ್ರೆ, ರಾಜ್ಯದ ೧೦೦ ಅತ್ಯಂತ ಭ್ರಷ್ಟ ನಾಯಕರನ್ನ ಗುರುತಿಸಿ, ಅವರನ್ನು ವಿಚಾರಣೆಗೆ ಒಳಪಡಿಸಿ ಶಿಕ್ಷೆ ನೀಡಲು ಹೊಸ ಕಾನೂನನ್ನು ಜಾರಿಗೆ
ತರಲಾಗುವುದು ಎಂದು ಪ್ರಶಾಂತ್ ಕಿಶೋರ್ ಭರವಸೆ ಕೂಡ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು