LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪಿಎಸ್‍ಐ ಪರೀಕ್ಷೆಗೆ ಮುಂಜಾಗ್ರತೆ: ಪರಮೇಶ್ವರ್

ಬೆಂಗಳೂರು: ಪಿಎಸ್‍ಐ, ಸಿಟಿಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ. ಅಕ್ರಮ ನಡೆದಿದ್ದರೇ ಕ್ರಮ ತೆಗೆದುಕೊಳ್ಳುತ್ತೇವೆ. ಮುಂಜಾಗ್ರತಾ ಕ್ರಮ ಕೈಗೊಂಡು ಪಿಎಸ್‍ಐ ನೇಮಕ ಪರೀಕ್ಷೆ ಮಾಡುತ್ತೇವೆ. ಬೆಂಗಳೂರು ಕೇಂದ್ರದಲ್ಲೇ ಪಿಎಸ್‍ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಕರಣ ಸಂಬಂಧ ಗುಪ್ತಚರ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಮಾಹಿತಿ ಪಡೆಯುವಾಗ ಆಡಿಯೋ ಬೆಳಕಿಗೆ ಬಂದಿದೆ. ಮಾಹಿತಿ ಕಲೆ ಹಾಕಲು ಫೇಕ್ ಆಡಿಯೋ ಮಾಡಿದ್ದೆ ಅಂತ ಪಿಎಸ್‍ಐ ಲಿಂಗಯ್ಯ ಹೇಳಿದ್ದಾರೆ.

ಆಡಿಯೋ ಸತ್ಯನಾ, ಅಲ್ವಾ ಅನ್ನೋದರ ಬಗ್ಗೆ ಸಿಸಿಬಿ ತನಿಖೆ ಮಾಡುತ್ತಿದೆ. ಮುಂಜಾಗ್ರತಾ ಕ್ರಮ ಕೈಗೊಂಡು ಪಿಎಸ್‍ಐ ನೇಮಕ ಪರೀಕ್ಷೆ ನಡೆಸುತ್ತೇವೆ ಎಂದರು.ಒಳಮೀಸಲಾತಿ ವಿಚಾರವಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರದ ಮಂತ್ರಿಗಳೇ ಒಳಮೀಸಲಾತಿ ಸಾದ್ಯವಿಲ್ಲ ಅಂತ ಹೇಳಿಕೆ ನೀಡಿದ್ದರು.

ಈಗ ಸಂವಿಧಾನ ತಿದ್ದುಪಡಿ ಮಾಡಿ ಅದಕ್ಕೆ ಅವಕಾಶ ಮಾಡಿಕೊಡಿ ಅಂತ ತೀರ್ಮಾನ ಮಾಡಿ ಕಳಿಸಿದ್ದೇವೆ. ಈ ಸಂಬಂಧ ಒಂದು ಸಮಿತಿ ರಚಿಸಿ, ಸಂವಿಧಾನ ತಿದ್ದುಪಡಿ ಮಾಡಬೇಕು. ಮೊದಲನೇ ಹಂತವಾಗಿ ಸಮಿತಿ ರಚಸಿದ್ದಾರೆ. ಸಂವಿಧಾನ ತಿದ್ದುಪಡಿ ಮಾಡುತ್ತಾ ಅಥವಾ ಸಾಧ್ಯವಿಲ್ಲ ಅಂತ ವರದಿ ನೀಡುತ್ತಾರಾ? ಸಮಿತಿ ಸದಸ್ಯರು ಏನು ಹೇಳುತ್ತಾರೆ ನೋಡಬೇಕು ಎಂದರು.

ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ವಿಚಾರವಾಗಿ ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಲವು ಮಾರ್ಗ ಸೂಚಿಗಳನ್ನು ನಮಗೆ ಹೇಳಿದ್ದಾರೆ. ನಮ್ಮ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷರು ಬಂದಿದ್ದರು. ನಮಗೆ ಕೊಟ್ಟ ಜವಾಬ್ದಾರಿಗಳ ಮೇಲೆ ಹೆಸರುಗಳನ್ನು ಕೊಟ್ಟಿದ್ದೆವೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು