LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಗ್ರಾಪಂಗಳ ಅಭಿವೃದ್ಧಿಯತ್ತ ಅಧ್ಯಕ್ಷರು ಆದ್ಯತೆ ನೀಡಬೇಕು: ಮುನಿಯಪ್ಪ

ದೊಡ್ಡಬಳ್ಳಾಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಪಂಚಾಯತಿ
ಯ ಅಧ್ಯಕ್ಷರು, ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ ಗ್ರಾಮ ಪಂಚಾಯತಿಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ದೇವನಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯಲ್ಲಿನ ಲೋಟಸ್ ಅರೇನಾದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೂಲಭೂತವಾಗಿ ಗ್ರಾಮಗಳು ಅಭಿವೃದ್ಧಿಯಾಗಬೇಕಾದರೆ ಪಂಚಾಯತಿಯ ಚುನಾಯಿತ ಪ್ರತಿನಿಧಿಗಳ ಪ್ರಮುಖ ಪಾತ್ರವಿದೆ.
ಗ್ರಾಮ ಸ್ವರಾಜ್ಯ ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಸಾದ್ಯ. ಸ್ವದೇಶಿ ಉತ್ಪನ್ನಗಳನ್ನು ತಯಾರಿಸಿ ಸ್ವಾವಲಂಬಿಗಳಾಗಿ ಬೇರೆಯವರ ಮೇಲೆ ಅವಲಂಬಿತರಾಗದೆ ಬದುಕಬೇಕು ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳ ಒದಗಿಸುವುದು ಗ್ರಾಮ ಪಂಚಾಯತಿಗಳ ಕರ್ತವ್ಯ. ಗ್ರಾಮದ ಹಿತಾಸಕ್ತಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳ ಪಾತ್ರ ಬಹುಮುಖ್ಯ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಸ್ಯೆ ಬಗೆಹರಿದರೆ ತಾಲ್ಲೂಕು ಮಟ್ಟದಲ್ಲಿ ಜನರ ಅಲೆದಾಟ ತಪ್ಪುತ್ತದೆ. ರೈತರ, ಜನಸಾಮಾನ್ಯರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸಿ. ಜನಸ್ನೇಹಿ ಆಡಳಿತ ನೀಡಿ. ಸಾರ್ವಜನಿಕ ಪರವಾಗಿ ಕೆಲಸ ಮಾಡಿ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಅ. ದೇವೇಗೌಡ ಮಾತನಾಡಿ ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದಿಂದ ಮಹಿಳೆಯರಿಗೆ ಸೇರಿದಂತೆ ಎಲ್ಲರಿಗೂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಸಿಗುತ್ತಿದೆ. ಅಧಿಕಾರಿಗಳು, ಅಧ್ಯಕ್ಷರುಗಳು ಸಮನ್ವಯ ಸಾಧಿಸಿ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಗ್ರಾಮ ಪಂಚಾಯತಿಗೆ ಹೆಚ್ಚಿನ ಅಧಿಕಾರವನ್ನು ಸರ್ಕಾರ ನೀಡಿದೆ. ಭಾರತದ ನಿಜವಾದ ಶಕ್ತಿ ಗ್ರಾಮಗಳು. ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾದ್ಯ. ಇದು ಮಹಾತ್ಮ ಗಾಂಧಿಜೀಯವರ ಕನಸು ಎಂದರು. ಕನ್ನಡ ಶಾಲೆಯ ಉಳಿವಿಗೆ ಶ್ರಮ ವಹಿಸಿ ಕನ್ನಡ ಭಾಷೆಯನ್ನು ಬಳಸಬೇಕು. ಭಾರತದ ಆತ್ಮ ಗ್ರಾಮಗಳು. ಸ್ವಚ್ಚ ಭಾರತಕ್ಕೆ ಒತ್ತು ನೀಡಿ ಗ್ರಾಮದ ಸ್ವಚ್ಚತೆಗೆ ಆಧ್ಯತೆ ನೀಡಿ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಉಮಾ ಮಹದೇವನ್ ಅಪರ ಮುಖ್ಯ ಕಾರ್ಯದರ್ಶಿಗಳು ಗ್ರಾಮೀಣಾಭಿವೃದ್ಧಿ ಇಲಾಖೆ, ಪವನ್ ಕುಮಾರ್ ಮಾಲಾಪತಿ ಆಯುಕ್ತರು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು,ಜಿಲ್ಲಾ ಮಟ್ಟದ ಅಧಿಕಾರಿಗಳು, ಕೊನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಮಂಜುನಾಥ್, ಉಪಾಧ್ಯಕ್ಷರಾದ ಪುಷ್ಪ ಶಿವಕುಮಾರ್, ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರುಗಳು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು