LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಧಾನಿ-ಸಿಎಂ ಭೇಟಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‍ಪುಟ್ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ,566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‍ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.

ರೈತರಿಗೆ ಇನ್‍ಪುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು.

ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ.

ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‍ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು