ನವದೆಹಲಿ: ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್‌ಘಾಟ್‌ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ಇತ್ತ, ದೇಶಾದ್ಯಂತ ನಾಯಕರು ಮತ್ತು ನಾಗರಿಕರು ಗಾಂಧಿ ಜಯಂತಿಯನ್ನು ಆಚರಿಸಿ, ಶಾಂತಿ, ಅಹಿಂಸೆ ಮತ್ತು ಸ್ವಚ್ಛತೆಯ ಕುರಿತಾದ ಅವರ ಸಂದೇಶವನ್ನು ಸ್ಮರಿಸಿದರು.ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ಗೆ ಆಗಮಿಸಿ, ರಾಷ್ಟçಪಿತನ ಜನ್ಮದಿನದ ಅಂಗವಾಗಿ ಗಾಂಧೀಜಿಯವರ ಸಮಾಧಿಯ ಬಳಿ ನಡೆದ ಸರ್ವಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮದಿನದ ಅಂಗವಾಗಿ ವಿಜಯ್ ಘಟ್‌ನಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ರಾಜ್‌ಘಾಟ್‌ನಲ್ಲಿ ನಡೆದ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾತ್ಮ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ದೆಹಲಿ ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು, ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಉಪಾಧ್ಯಕ್ಷ ಸಿಪಿ ರಾಧಾಕೃಷ್ಣನ್ ಅವರು ಈ ಸಂದರ್ಭದಲ್ಲಿ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.