LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದೋಷರಹಿತ ಪರೀಕ್ಷಾ ವ್ಯವಸ್ಥೆಗೆ ಪ್ರಧಾನಿ ಸೂಚನೆ

ನವದೆಹಲಿ: ಆಡಳಿತಾರೂಢ ಎನ್‌ಡಿಎ ಸಂಸದೀಯ ಪಕ್ಷದ `ಮಂಗಲ್ ಮಿಲನ್' ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಟ್ ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕುರಿತು ಅತ್ಯಂತ ಗಂಭೀರವಾಗಿ ಮಾತನಾಡಿದ್ದಾರೆ. ``ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವುದು ಸರ್ಕಾರದ ಕೇವಲ ಕರ್ತವ್ಯವಲ್ಲ, ಅದೊಂದು `ರಾಷ್ಟ್ರೀಯ ಜವಾಬ್ದಾರಿ' ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಸಭೆಯ ನಂತರ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿಯವರ ಮಾತುಗಳನ್ನು ಮಾಧ್ಯಮಗಳಿಗೆ ವಿವರಿಸಿದರು.ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು ಎಂದಿರುವ ಪ್ರಧಾನಿ. ಪರೀಕ್ಷಾ ಪ್ರಕ್ರಿಯೆಯನ್ನು ಕಲುಷಿತಗೊಳಿಸಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಕಿಡಿಗೇಡಿಗಳಿಗೆ ಕಾನೂನಿನಡಿಯಲ್ಲಿ ಸಿಗಬಹುದಾದ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಪ್ರಧಾನಿ ಮೋದಿ ಖಡಕ್ ಆಗಿ ಸೂಚಿಸಿದ್ದಾರೆ.ಭವಿಷ್ಯದಲ್ಲಿ ಯಾವುದೇ ರೀತಿಯ ಸೋರಿಕೆ ನಡೆಯದಂತೆ ಅತ್ಯಂತ ಪಾರದರ್ಶಕ ಹಾಗೂ ದೋಷರಹಿತ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಲು ಸರ್ಕಾರಿ ಮತ್ತು ಸಾಂಸ್ಥಿಕ ಮಟ್ಟದಲ್ಲಿ ಸಾಮೂಹಿಕ ಪ್ರಯತ್ನಗಳು ನಡೆಯಬೇಕೆಂದು ಕರೆ ನೀಡಿದ್ದಾರೆ. ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯುವಂತೆ ಮಾಡಲು ಪ್ರಧಾನಿ ನಾಯಕರೊಂದಿಗೆ ಚರ್ಚಿಸಿದರು.ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ದೇಶದ ಭವಿಷ್ಯ ಮತ್ತು ಯುವಜನತೆಯ ಕಲ್ಯಾಣಕ್ಕಾಗಿ ಕೆಲಸ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಸಂಸದರ ಮೇಲಿದೆ. ಶಾಸಕಾಂಗ ವ್ಯವಹಾರಗಳನ್ನು ಬೆಂಬಲಿಸಲು ಎನ್‌ಡಿಎ ಮೈತ್ರಿಕೂಟದ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಇರಬೇಕು. ಹಾಗೆಯೇ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಸಹ ಗದ್ದಲ ಎಬ್ಬಿಸದೆ ರಚನಾತ್ಮಕವಾಗಿ ದೇಶದ ಹಿತದೃಷ್ಟಿಯಿಂದ ಭಾಗವಹಿಸಬೇಕು'' ಎಂದು ಪ್ರಧಾನಿ ಮೋದಿ ಆಶಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು