LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mandya

ಆದಿಚುಂಚನಗಿರಿಗೆ ನಾಳೆ ಪ್ರಧಾನಿ ಭೇಟಿ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ `ಶ್ರೀ ಗುರು ಭೈರವೈಕ್ಯ ಮಂದಿರ'ವನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಇಡೀ ಆದಿಚುಂಚನಗಿರಿ ಕ್ಷೇತ್ರ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ದ್ರಾವಿಡ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಈ ಭೈರವೈಕ್ಯ ಮಂದಿರವು ಹಲವು ವಿಶೇಷತೆಗಳಿಂದ ಕೂಡಿದೆ. ಕಾರ್ಯಕ್ರಮಕ್ಕಾಗಿ ಬಿಜಿಎಸ್ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಮುನ್ನೆಚ್ಚರಿಕಾ ಕ್ರಮವಾಗಿ 2000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.ಈ ಭೇಟಿಯ ವೇಳೆ ಪ್ರಧಾನಿ ಮೋದಿಯವರಿಗಾಗಿ ವಿಶೇಷ `ಮೈಸೂರು ಪೇಟ' ಸಿದ್ಧಪಡಿಸಲಾಗಿದೆ. ಮೈಸೂರಿನ ಕಲಾವಿದ ನಂದನ್ ಸಿಂಗ್ ಅವರು ಐದು ದಿನಗಳ ನಿರಂತರ ಶ್ರಮದಿಂದ ಇದನ್ನು ತಯಾರಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಧರಿಸುತ್ತಿದ್ದ ಮಾದರಿಯಲ್ಲಿರುವ ಈ ಪೇಟವು ಬನಾರಸ್ ಬಟ್ಟೆ ಮತ್ತು ಗಂಡಭೇರುAಡ ವಿನ್ಯಾಸದಿಂದ ಕೂಡಿದೆ. ನಿರ್ಮಲಾನಂದನಾಥ ಶ್ರೀಗಳ ಅಣತಿಯಂತೆ `ನಮ್ಮೂರು ನಮ್ಮೋರು' ಸೇವಾ ಸಂಸ್ಥೆಯ ವತಿಯಿಂದ ಈ ಗೌರವ ಅರ್ಪಿಸಲಾಗುತ್ತಿದೆ.
ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 10:50ಕ್ಕೆ ಎಚ್‌ಎಎಲ್‌ನಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್ ತಲುಪಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ರಸ್ತೆ ಮಾರ್ಗವಾಗಿ ಶ್ರೀಕ್ಷೇತ್ರದ ಮಠಕ್ಕೆ ತಲುಪಿ, ಭೈರವೈಕ್ಯ ಮಂದಿರದ ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ ಬಿಜಿಎಸ್ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ನಂತರ ಮತ್ತೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಮರಳಿ, ಅಲ್ಲಿಂದ ಕೇರಳ ಪ್ರವಾಸಕ್ಕೆ ತೆರಳಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು