LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Udupi

"ನ.೨೮ರಂದು ಉಡುಪಿಗೆ ಪ್ರಧಾನಿ ಭೇಟಿ"

ಬೆಂಗಳೂರು: ನವೆಂಬರ್ ೨೮ರಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ದೃಢಪಡಿಸಿದೆ. ನವೆಂಬರ್ ೨೮ರಂದು ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡುವ ಬಗ್ಗೆ ಪ್ರಧಾನಿ ಕಚೇರಿ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಆ ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ನವೆಂಬರ್ ೨೮ರಂದು ಬೆಳಿಗ್ಗೆ ೧೧.೦೫ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣವೇ ೧೧.೧೦ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ ೧೧.೩೫ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ.

ಉಡುಪಿಯಲ್ಲಿ ಈ ಹಿಂದೆ ಯೋಜಿಸಲಾಗಿದ್ದ ರೋಡ್ ಶೋ ರದ್ದಾಗಿದೆ. ಪ್ರಧಾನಿ ಮೋದಿ ಮಧ್ಯಾಹ್ನ ೧೨ ಗಂಟೆಗೆ ನೇರವಾಗಿ ಕೃಷ್ಣ ಮಠಕ್ಕೆ ಭೇಟಿ ನೀಡಿ, ಬಳಿಕ ಸುವರ್ಣತೀರ್ಥ ಮಂಟಪ ಮತ್ತು ಕನಕನ ಕಿಂಡಿಗೆ ಸ್ವರ್ಣ ಕವಚ ಲೋಕಾರ್ಪಣೆ ಮಾಡಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆದು ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಭಗವದ್ಗೀತೆಯ ೧೦ ಶ್ಲೋಕಗಳನ್ನು ಪಠಿಸಲಿದ್ದಾರೆ. ಈ ಧಾರ್ಮಿಕ ಉತ್ಸವದಲ್ಲಿ ಒಂದು ಲಕ್ಷ ಭಕ್ತರು ಭಾಗವಹಿಸಲಿದ್ದು, ಒಂದೇ ಸಮಯದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಲಿದ್ದಾರೆ.ಇದಾದ ಬಳಿಕ ಮೋದಿ ಅವರು ಮಧ್ಯಾಹ್ನ ೧.೩೫ ಕ್ಕೆ ಉಡುಪಿ ಹೆಲಿಪ್ಯಾಡ್‌ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ಅಲ್ಲಿಂದ ಮಧ್ಯಾಹ್ನ ೨ ಗಂಟೆಗೆ ಗೋವಾಕ್ಕೆ ತೆರಳಲಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಗೆ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಕಾರ್ಯದರ್ಶಿಗೆ ಪ್ರಧಾನಿ ಕಚೇರಿ ಸೂಚಿಸಿದೆ. ಭದ್ರತಾ ವ್ಯವಸ್ಥೆಗಳ ಕುರಿತು ಎಸ್‌ಪಿಜಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಸಂಘಟಕರಿಗೆ ಸೂಚಿಸಲಾಗಿದೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು