LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

"ಆರ್‌ಎಸ್‌ಎಸ್‌ನಿಂದ ರಾಷ್ಟ್ರಧ್ವಜಕ್ಕೆ ಅಗೌರವ ಪ್ರಿಯಾಂಕ್ ಖರ್ಗೆಯಿಂದ ದಾಖಲೆ ಬಿಡುಗಡೆ"

ಬೆಂಗಳೂರು: 'ಆರೆಸ್ಸೆಸ್ ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ ೧೦೦ ವರ್ಷಗಳಾಗಿವೆ'' ಎಂದು ಆರೋಪಿಸಿರುವ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಇದಕ್ಕೆ ಸಂಬಂಧಿಸಿದಂತೆ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ತನ್ನ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಒಂದನ್ನು ಮಾಡಿರುವ ಪ್ರಿಯಾಂಕ್ ಖರ್ಗೆ, ''ಆರೆಸ್ಸೆಸ್ ೧೯೪೮ರ ಫೆಬ್ರವರಿ ೨೪ರಂದು ರಾಷ್ಟ್ರಧ್ವಜವನ್ನು ಹೇಗೆ ಅವಮಾನಿಸಿತ್ತು ಎಂಬುದನ್ನು ಕೇಂದ್ರ ಸರಕಾರದ ಗೃಹ ಸಚಿವಾಲಯವು ಪಂಜಾಬ್ ನ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರ ಇಲ್ಲಿದೆ'' ಎಂದು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಂಡಿದ್ದಾರೆ.

'' ಆರೆಸ್ಸೆಸ್ ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ ೧೦೦ ವರ್ಷ, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು ೧೦೦ ವರ್ಷ, ಭಾರತದ ಸಂವಿಧಾನವನ್ನು ವಿರೋಧಿಸಿ ೧೦೦ ವರ್ಷ, ರಾಷ್ಟ್ರ ವಿರೋಧಿತ್ವಕ್ಕೆ ೧೦೦ ವರ್ಷಗಳು'' ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ''ಇತಿಹಾಸವು ಆರೆಸ್ಸೆಸ್ ನಮ್ಮ ದೇಶಕ್ಕೆ ಮಾಡಿರುವ ನಿರ್ಲಜ್ಜ ದ್ರೋಹದ ನಿದರ್ಶನಗಳಿಂದ ತುಂಬಿದೆ. ಇಡೀ ಬಿಜೆಪಿ ವ್ಯವಸ್ಥೆ ಎಷ್ಟೇ ಪ್ರಯತ್ನಿಸಿದರೂ ಆರೆಸ್ಸೆಸ್ ನ ಸಂವಿಧಾನ ವಿರೋಧಿ ಚರಿತ್ರೆಯನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ. ಬಿಜೆಪಿ ನಾಯಕರು ಮತ್ತು ಸ್ವಯಂಸೇವಕರು ನಿಜವಾದ ಆರೆಸ್ಸೆಸ್ ಇತಿಹಾಸವನ್ನು ತಿಳಿದುಕೊಳ್ಳುವ ಸಮಯ ಇದು'' ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು