LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮಾಧ್ಯಮಗಳ ವಿರುದ್ಧ ಪ್ರಿಯಾಂಕ್ ಕಿಡಿ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಮಾಧ್ಯಮಗಳು ಸರ್ಕಾರವನ್ನು ನೇಣಿಗೆ ಹಾಕಲು ಮುಂದಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಬಗ್ಗೆ 11 ಗಂಟೆಗೆ ವರದಿ ಬರಲಿದೆ. ಅದರ ಬಳಿಕ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ನಿನ್ನೆವರೆಗಿನ ಮಾಹಿತಿ ಪ್ರಕಾರ ಇದೊಂದು ಕಾಲ್ಪನಿಕ ಘಟನೆ. ನಾವು ವಿಡಿಯೋದಲ್ಲಿರುವ ಆಡಿಯೋವನ್ನು ಪರಿಶೀಲಿಸಿದ್ದೇವೆ.

ಅದರಲ್ಲಿ ಯಾವುದೇ ಘೋಷಣೆಗಳು ಪಾಕಿಸ್ತಾನದ ಪರವಾಗಿ ಕೂಗಿರುವುದು ಕಂಡುಬಂದಿಲ್ಲ. ನಾಸಿರ್ ಸಾಬ್, ನಾಸಿರ್ ಹುಸೇನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ, ಪಾಕಿಸ್ತಾನದ ಪರವಾಗಿ ಯಾವುದೇ ಘೋಷಣೆ ಕೂಗಿಲ್ಲ ಎಂದರು. ಆ ರೀತಿ ಘೋಷಣೆ ಕೂಗಿದ್ದರೆ ವೈಯಕ್ತಿಕ. ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ.

ಈ ರೀತಿಯ ಘೋಷಣೆಗಳನ್ನು ಕೂಗುವುದು ದೇಶದ್ರೋಹ ಘಟನೆಯಾಗುತ್ತದೆ.ಆಡಿಯೋ ಫೋರಂ ಸಿಟ್‍ನಲ್ಲಿ ಪ್ರಸಾರವಾಗುತ್ತಿರುವ ವಿಡಿಯೋ, ಆಡಿಯೋ ಮಿಸ್ ಆಗಿರುವುದಾಗಿ ಹೇಳಲಾಗಿತ್ತು. ಆದರೂ ನಾವು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದರು. ಸುಳ್ಳು ಸುದ್ದಿಗಳ ಪ್ರಸಾರ ತಡೆಗೆ ಕಾನೂನು ಕೂಡ ಇದೆ. ಮಾಧ್ಯಮ 4 ನೆ ಅಂಗವಾಗಿದ್ದು ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು ಎಂದರು.

ಬಿಜೆಪಿ ಚುನಾವಣೆ ಸೋಲಿನಿಂದ ಹತಾಶರಾಗಿ ಹೋರಾಟಕ್ಕಿಳಿದಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾದ ನಾಸಿರ್ ಹುಸೇನ್ ಅವರು ಮಾಧ್ಯಮದ ಪ್ರತಿನಿಗಳನ್ನು ಏಕವಚನದಲ್ಲಿ ಮಾತನಾಡಿದ್ದು ಸರಿಯಲ್ಲ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು