LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಜಾಹೀರಾತು ಫಲಕಗಳಲ್ಲಿ ಕನ್ನಡ ಮಾಯ ಖಾಸಗಿ ಶಾಲೆಗಳಿಗೆ ಕನ್ನಡ ಪರ ಸಂಘಟನೆಗಳ ಎಚ್ಚರಿಕೆ

ರಾಮನಗರ: ನಗರದ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪ್ರಾರಂಭವಾಗಿದ್ದು ನಗರದೆಲ್ಲೆಡೆ ಇಂಗ್ಲೀಷ್ ಜಾಹೀರಾತು ಫಲಕ ರಾರಾಜಿಸುತ್ತಿದ್ದು ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಖಾಸಗಿ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಆಡಳಿತ ಮಂಡಳಿಗೆ ಬಿಸಿ ಮುಟ್ಟಿಸಿದರು. 
ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷರಾದ ಜಗದೀಶ್ ಮಾತನಾಡಿ ಸರ್ಕಾರದ ಆದೇಶದ ಪ್ರಕಾರ ಕನ್ನಡ ಅಕ್ಷರಗಳು ಶೇ. 60ರಷ್ಟು ದೊಡ್ಡದಾಗಿ ಇರಬೇಕು. ಇಂಗ್ಲಿಷ್ ಅಕ್ಷರಗಳು ಶೇ. 40ರಷ್ಟು ಸಣ್ಣದಾಗಿ ಇರಬೇಕು. ಈ ಎಲ್ಲ ನಿಯಮಗಳನ್ನು ಮೀರಿ ಇಂಗ್ಲಿಷ್ ಜಾಹೀರಾತು ಫಲಕಗಳೇ ನಗರದಾದ್ಯಂತ ರಾರಾಜಿಸುತ್ತಿವೆ. ಕನ್ನಡ ನಾಮಫಲಕಗಳು ಇಲ್ಲದಂತೆ ಆಗಿದೆ. ಆದ್ದರಿಂದ ಎಲ್ಲ ಶಾಲೆಗಳಿಗೆ ಬಿಇಒ ಕಚೇರಿ ಮೂಲಕ ನೋಟಿಸ್ ಜಾರಿ ಮಾಡಿ ಕೂಡಲೇ ಇಂಗ್ಲಿಷ್ ಜಾಹೀರಾತುಗಳನ್ನು ತೆಗೆದು ಕನ್ನಡ ಜಾಹೀರಾತು ಫಲಕ ಅಳವಡಿಸಿಕೊಳ್ಳಲು ಸೂಚಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಎಂಎನ್‌ಆರ್ ರಾಜು ಮಾತನಾಡಿ ಖಾಸಗಿ ಶಾಲೆಯವರಿಗೆ ಕನ್ನಡ ನೆಲ, ಜಲ ಎಲ್ಲವೂ ಬೇಕು ಆದರೆ ಖಾಸಗಿ ಶಾಲೆಯವರು ಕನ್ನಡದ ಬದಲು ಇಂಗ್ಲಿಷ್ ಜಾಹೀರಾತು ಫಲಕಗಳನ್ನು ಅಳವಡಿಸುತ್ತಿರುವುದು ಖಂಡನೀಯ, ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು, ಖಾಸಗಿ ಶಾಲೆಯವರಿಗೆ ಯಾವುದೇ ಭಯ ಇಲ್ಲದಂತಾಗಿದೆ ಕಾರಣ ನಮ್ಮ ಅಧಿಕಾರಿಗಳಿಂದ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂಗ್ಲಿಷ್ ನಾಮಫಲಕಗಳ ಪ್ರದರ್ಶನ ವನ್ನು ಸಹಿಸುವುದಿಲ್ಲ ನಾವು ಯಾವುದೇ ದುರುದ್ದೇಶದಿಂದ ಯಾವುದೇ ಹೋರಾಟ ಮಾಡುತ್ತಿಲ್ಲ ನಮ್ಮ ಸ್ವಂತ ಹಣ ಖರ್ಚು ಮಾಡಿ ಕನ್ನಡ ಉಳಿವಿಗಾಗಿ ಹೋರಾಟ ಮಾಡುತ್ತಿದ್ದೇವೆ, ಕನ್ನಡದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಎಚ್ಚರಿಸಿದರು.
ಕರವೇ ಸ್ವಾಭಿಮಾನಿ ಬಣ ರಾಜ್ಯ ಉಸ್ತುವಾರಿ ಅಧ್ಯಕ್ಷರಾದ ಶಿವುಗೌಡ ಮಾತನಾಡಿ ಅಧಿಕಾರಿಗಳು ಖಾಸಗಿ ಶಾಲೆಗಳಿಂದ ಹಣ ಪಡೆದು ಯಾವುದೇ ಕ್ರಮ ವಹಿಸದೆ ಕಂಡರು ಕಾಣದಂತೆ ಕುಳಿತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ, ಇನ್ನು ನಗರಸಭೆ ಅಧಿಕಾರಿಗಳು ಸಹ ಕನ್ನಡದ ವಿಚಾರದಲ್ಲಿ ಬೇಜವಾಬ್ದಾರಿ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರಲ್ಲದೆ ಶೇ. 60ರಷ್ಟು ಕನ್ನಡ ಬಳಸದ ಖಾಸಗಿ ಶಾಲೆಗಳ ಬ್ಯಾನರ್‌ಗಳಿಗೆ ನಗರಸಭೆ ಅನುಮತಿ ಕೊಡ ಬಾರದು, ಇಂಗ್ಲಿಷ್ ನಾಮಫಲಕಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ಕರುನಾಡ ಸೇನೆ ರಾಜ್ಯ ಉಸ್ತುವಾರಿ ಗಂಗಾಧರ್, ಜಿಲ್ಲಾಧ್ಯಕ್ಷ ಜಯಕುಮಾರ್, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳಾದ ಕರುನಾಡ ಕುಮಾರ್, ಆರ್‌ಬಿಎಲ್ ಲೋಕೇಶ್, ವಿಜಯ್‌ಕುಮಾರ್ ಸಿ.ಎಂ, ಜಯರಾಮು, ಚೇತನ್ ಕುಮಾರ್, ಪ್ರಸನ್ನ, ಪ್ರದೀಪ್, ವಿನೋದ್ ಸೇರಿದಂತೆ ಇನ್ನಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು