LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

ದೇವನಹಳ್ಳಿ: ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಹೇಳಿದರು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ *75ನೇ ಮಾನವ ಹಕ್ಕುಗಳ ದಿನಾಚರಣೆ* ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ರಕ್ಷಣೆ ನೀಡುವ ಹಕ್ಕುಗಳನ್ನು ವಿವರಿಸಲಾಗಿದೆ. ಜೀವನದ ಸ್ವಾತಂತ್ರ್ಯ ಸಮಾನತೆ ಮತ್ತು ವ್ಯಕ್ತಿಯ ಘನತೆಯ ಹಕ್ಕುಗಳೇ ಮಾನವ ಹಕ್ಕುಗಳು, ಎಲ್ಲಾ ಮಾನವರು ಹುಟ್ಟಿನಿಂದ ಘನತೆ ಮತ್ತು ಹಕ್ಕುಗಳಲ್ಲಿ ಸಮಾನರು ಮತ್ತುಪ್ರತಿಯೊಬ್ಬರೂ ಯಾವುದೇ ತರಹದ ತಾರತಮ್ಯಇಲ್ಲದೆ ಹಕ್ಕುಗಳನ್ನು ಮತ್ತು ಸ್ವಾತಂತ್ರ್ಯವನ್ನು ಹೊಂದುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ. ಪ್ರತಿನಿತ್ಯ ಮಾನವ ಹಕ್ಕುಗಳು ಉಲ್ಲಂಘನೆ ಆಗುತ್ತಿವೆ.

ಸಂವಿಧಾನ ಅಡಿಯಲ್ಲಿಮಾನವ ಹಕ್ಕುಗಳ ರಕ್ಷಣೆ ಮಾಡುವ ಮೂಲಕ ಉಲ್ಲಂಘನೆಯಾಗದ ಹಾಗೇ ನೋಡಿಕೊಳ್ಳಬೇಕು ಎಂದು ಹೇಳಿದರು.ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಮಾನವ ಹಕ್ಕುಗಳ ದಿನಾಚರಣೆಯ “ಪ್ರತಿಜ್ಞಾ ವಿಧಿ” ಯನ್ನು ಬೋಧಿಸಿದರು.
ಪ್ರತಿಯೊಬ್ಬ ಪ್ರಜೆಯ ಮಾನವ ಹಕ್ಕುಗಳನ್ನುರಕ್ಷಿಸುವುದು ರಾಜ್ಯದ ಮತ್ತು ಎಲ್ಲಾ ಸಾರ್ವಜನಿಕಸಂಸ್ಥೆಗಳ ಆದ್ಯ ಕರ್ತವ್ಯ. ರಾಜ್ಯದ ಯಾವುದೇ ಸಾರ್ವಜನಿಕ ಕಚೇರಿಯಿಂದಾಗಲಿ ಅಥವಾ ಸಂಸ್ಥೆಯಿಂದಾಗಲಿ ಯಾವುದೇ ರೀತಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ ಅಥವಾ ಮಾನವ ಹಕ್ಕುಗಳನ್ನು ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭದಲ್ಲಿ ,ತೊಂದರೆಗೆ ಒಳಗಾದವರಾಗಲೀ ಅಥವಾ ಆತನ/ಆಕೆಯ ಪರವಾಗಿ ಬೇರೆ ಯಾರಾದರೂ ಸಮಸ್ಯೆ ಪರಿಹರಿಸಲು, ನ್ಯಾಯ ದೊರಕಿಸಿಕೊಳ್ಳಲು ಮಾನವ ಹಕ್ಕುಗಳ ಆಯೋಗಕ್ಕೆ ಯಾವುದೇ ಖರ್ಚಿಲ್ಲದೆ ಉಚಿತವಾಗಿ ದೂರು ನೀಡಬಹುದು.

ದೂರು ಸಲ್ಲಿಸಲು ನಿಮ್ಮ ಮೊಬೈಲ್ ನ ಗೂಗಲ್ ಪ್ಲೇ ಸ್ಟೋರ್ ಮುಖಾಂತರ”ಮಾನವ ಹಕ್ಕು ರಕ್ಷಣೆ” ಎಂಬ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಸಲ್ಲಿಸಬಹುದು, ಅಥವಾ https://kshrc.karnataka.gov.in ಮಾನವ ಹಕ್ಕುಗಳ ಆಯೋಗದ ವೆಬ್ಸೈಟ್ ಮೂಲಕ ದೂರು ಸಲ್ಲಿಸಬಹುದು ಅಥವಾ ದೂರು ನಿರ್ವಹಣಾ ವ್ಯವಸ್ಥೆಯ ವೆಬ್ಸೈಟ್ www.hrcnet.nic.in
ಆನ್ಲೈನ್ ಮೂಲಕ ಸಲ್ಲಿಸಬಹುದು ಅಥವಾ ಸ್ಪಷ್ಟವಾಗಿ ಸರಳವಾಗಿ ಸಂಪೂರ್ಣ ವಿವರನ್ನೊಳಗೊಂಡ ಒಂದು ಪತ್ರದ ಮುಖಾಂತರ ಅಥವಾ ಆಯೋಗದ ಸರಳ ನಮೂನೆ ಮುಖಾಂತರ “ ಕರ್ನಾಟಕ ಮಾನವ ಹಕ್ಕುಗಳ ಆಯೋಗ ಗೇಟ್-05, ಎಂ.ಎಸ್ ಬಿಲ್ಡಿಂಗ್, ಡಾ.ಬಿ.ಆರ್ ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ದೂರು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 180042523333,

ಕರ್ನಾಟಕ ರಾಜ್ಯಮಾನವ ಹಕ್ಕುಗಳ ಆಯೋಗದ ದೂರವಾಣಿ ಸಂಖ್ಯೆ 080-22392201 ಗಳನ್ನು ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಹೇಳಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಕೀಲರಾದ ಚಂದ್ರರೆಡ್ಡಿ, ಚಿನ್ನಮ್ಮ ಮಾತನಾಡಿದರು.ಪ್ರಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಅನಿತಾ ಲಕ್ಷ್ಮಿಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಅಪರಜಿಲ್ಲಾಧಿಕಾರಿ ಅಮರೇಶ್ ಹೆಚ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆಯ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣ, ಜಿಲ್ಲಾ ಮಟ್ಟದ ಅಧಿಕಾರಿಗಳು, ಪೋಲಿಸ್ ಇಲಾಖೆ ಸಿಬ್ಬಂದಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು