LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಅಧಿಕಾರಿಗಳಿಂದ ಇಬ್ಬರು ಮಕ್ಕಳ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ಕೈಗೊಳ್ಳಲಾಯಿತು.

ಈ ತಪಾಸಣೆ ವೇಳೆಯಲ್ಲಿ ಒಬ್ಬ ಬಾಲ ಕಾರ್ಮಿಕ ಹಾಗೂ ಒಬ್ಬ ಕಿಶೋರ ಕಾರ್ಮಿಕನನ್ನು (ಇಬ್ಬರು ಮಕ್ಕಳನ್ನು) ರಕ್ಷಿಸಲಾಗಿದೆ. ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಲಾಗಿದೆ.ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತುಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ
ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು,

14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.

ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.

ಈ ಅನಿರೀಕ್ಷಿತ ತಪಾಸಣೆ ಹಾಗೂದಾಳಿಯಲ್ಲಿ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್ ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾನಿರ್ದೇಶಕ ಸುಬ್ಬಾರಾವ್ ಎಸ್, ಕಾರ್ಮಿಕ ನಿರೀಕ್ಷಕ ಯತೀಶ್ ಕುಮಾರ್, ಸಹಾಯಕ ಶಿಶು ಅಭಿವೃದ್ದಿಯೋಜನಾಧಿಕಾರಿ ಶಾಂತಮ್ಮ, ಶಿಕ್ಷಣ ಇಲಾಖೆಯ ಬಿ.ಆರ್.ಸಿ ನಾಗರಾಜು, ಸ್ವಯಂ ಸೇವಕ ಸಣ್ಣಕರಿಯಪ್ಪ, ಮಕ್ಕಳಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಹಾಗೂ ಸೌಮ್ಯ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು