LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಾಳೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ ಸಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ನಡೆಸಲು ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ನಾಳೆ ಬೆಳಗ್ಗೆ 10 ಗಂಟೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಿ ಬೆಂಗಳೂರು ಚಲೋಗೆ ಕರೆ ನೀಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಬರೋಬ್ಬರಿ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಇದ್ದಾರೆ. ಕೊರೊನಾ ಸಮಯದಲ್ಲಿ ಜೀವದ ಹಂಗು ತೊರೆದು ಕೊರೊನಾ ವಾರಿಯರ್ ಆಗಿ ಕೆಲಸ ಮಾಡಿದ್ದಾರೆ. ಈ ಸಮಯದಲ್ಲಿ ಹಲವು ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಮರಣ ಹೊಂದಿದ್ದಾರೆ.

ಇದರಿಂದ ಅನೇಕ ಕುಟುಂಬಗಳು ಬೀದಿ ಪಾಲಾಗಿವೆ.ಸರ್ಕಾರದಿಂದ 1,32,000ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರಿಗೆ ಗೌರವ ಧನ ಹೆಸರಲ್ಲಿ ಶೋಷಣೆ ಮಾಡುತ್ತಿದೆ. ಇವರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST