LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಎಸ್‌ಸಿಗೆ ಸೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು: ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಹಿಂದುಳಿದಿರುವ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಡಿವಾಳ ಸಂಘ ಬೆಂಗಳೂರಿನ ‘ಫ್ರೀಡಂ ಪಾರ್ಕ್’ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿತು.
ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಮಡಿವಾಳರ ಸಂಘ ಜಂಟಿಯಾಗಿ ಆಯೋಜಿಸಿದ ಅಹೋರಾತ್ರಿ ಪ್ರತಿಭಟನೆ.
ಮಾಚಿದೇವ ಸ್ವಾಮೀಜಿ, ಬಸವ ಮಾಚಿದೇವ ಸ್ವಾಮೀಜಿ, ಮುಕ್ತಾನಂದ ಸ್ವಾಮೀಜಿ ಹಾಗೂ ಕರ್ನಾಟಕ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಹನುಮಂತಪ್ಪ ಹಾಗೂ ಉಪಾಧ್ಯಕ್ಷ ದುರ್ಗೇಶ್ ಮಡಿವಾಳರ ಅವರ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಯಿತು.
‘ಮಡಿವಾಳ ಸಮಾಜ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಇದನ್ನು ಪರಿಗಣಿಸಿ, ದೇಶದ 18 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ. ಆ ಕ್ರಮವನ್ನು ಕರ್ನಾಟಕ ರಾಜ್ಯದಲ್ಲೂ ಕೈಗೊಳ್ಳಲು ರಾಜ್ಯ ಸರ್ಕಾರ ಕಾಳಜಿ ಪ್ರದರ್ಶಿಸಬೇಕು. ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇದು ಬಹಳ ಅಗತ್ಯವಾಗಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
`ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಈ ಹಿಂದೆ ಸಮಾಜದ ಸ್ವಾಮೀಜಿಗಳು ಹಾಗೂ ಹಿರಿಯರು ಹೋರಾಟ ನಡೆಸಿದ ಪರಿಣಾಮ, ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿ ವರದಿಯನ್ನು ಸ್ವೀಕರಿಸಿದೆ. ಆದರೆ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದೇ ನಿರ್ಲಕ್ಷ÷್ಯ ವಹಿಸಲಾಗಿದೆ. ಹೀಗಾಗಿ, ಈಗ ಸಂಘಟಿತರಾಗಿ ಹಕ್ಕನ್ನು ಪಡೆದುಕೊಳ್ಳಬೇಕಾಗಿದ್ದು, ಸರ್ಕಾರದ ಮೇಲೆ ಒತ್ತಡ ಹೇರಲು ಪ್ರತಿಭಟನೆ ನಡೆಸಲಾಗುತ್ತದೆ.
ಅಹಿಂದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಆಸಕ್ತಿ ವಹಿಸಿ ತಮ್ಮ ಅಧಿಕಾರಾವಧಿಯಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡಸುವುದಾಗಿ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು