LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ರಾಜ್ಯಪಾಲರ ಹಿಂದಿ ಧೋರಣೆ ವಿರೋಧಿಸಿ ಕರವೇಯಿಂದ ಪ್ರತಿಭಟನೆ

ಕೋಲಾರ: ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿತು.
ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇAದ್ರ, ರಾಜ್ಯ ಸರ್ಕಾರವು ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸಿದರು.
"ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ" ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ದುಷ್ಟ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ಸುರಕ್ಷಿತ ಸ್ವರ್ಗವನ್ನಾಗಿಸುವ ದೂರಗಾಮಿ ಉದ್ದೇಶಗಳು ಹಿಂದಿ ಮಾಫಿಯಾಗೆ ಇದೆ. ಅದರ ಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂಬುದು ಸ್ಪಷ್ಟ. ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಹುತ್ತದ ಒಳಗೆ ಇನ್ನೆಷ್ಟು ಹಾವುಗಳು ಇವೆಯೋ ಗೊತ್ತಿಲ್ಲ. ಎಲ್ಲವೂ ಹೊರಬರಲಿ ಎಂದು ತಮ್ಮ ಅಸಮಧಾನವನ್ನು ಹೊರ ಹಾಕಿದರು.
ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರ್ಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬೇಕಿಲ್ಲ. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ.
ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರ ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ. ರಾಜ್ಯಪಾಲ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲಿ ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ವಿ.ಮುನಿರಾಜು, ಮಹಿಳಾ ಅಧ್ಯಕ್ಷೆ ಲತಾಬಾಯಿ ಮಾಡಿಕ್, ತಾಲೂಕು ಅಧ್ಯಕ್ಷ ಕೋಲಾರ ಶಶಿಕುಮಾರ್, ಬಂಗಾರಪೇಟೆ ರಾಮ ಪ್ರಸಾದ್, ಮುಳಬಾಗಿಲು ಹುಸೇನ್, ಕೆಜಿಎಫ್ ನಂಜುAಡಪ್ಪ, ರೈತ ಘಟಕದ ಅಧ್ಯಕ್ಷ ಡಿ.ವಿ.ಮಂಜುನಾಥ್‌ಗೌಡ, ಜಿಲ್ಲಾಧ್ಯಕ್ಷ ಶಂಕರರೆಡ್ಡಿ, ಪದಾಧಿಕಾರಿಗಳಾದ ಗಣೇಶ್, ಸಂತೋಶ್, ಯಾನಾದಹಳ್ಳಿ ಮಂಜುನಾಥ್, ಭಾಗ್ಯಲಕ್ಷ್ಮೀ, ಭಾಗ್ಯ, ನೇತ್ರ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು