LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನಾ ಮೆರವಣಿಗೆ

ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಖಿಲ ಭಾರತ ಕಿಸಾನ್ ಸಭಾ ಕಾರ್ಯಕರ್ತರು ಮತ್ತು ರೈತರು ಮೆರವಣಿಗೆ ನಡೆಸಿದರು.ಅಬ್ಬನಕುಪ್ಪೆ ಬಿಎಂಟಿಸಿ ಡಿಪೋ ಬಳಿಯಿಂದ ಪ್ರಾರಂಭಗೊAಡ ಮೆರವಣಿಗೆ ಬೈರಮಂಗಲ ವೃತ್ತದವರೆಗೆ ನಡೆಯಿತು. ಸುಮಾರು 2 ಕಿ.ಮೀ.ವರೆಗೆ ಕಾರ್ಯಕರ್ತರು ಕೆಂಪು ಮತ್ತು ಹಸಿರು ಬಾವುಟ ಹಿಡಿದು ಹೆಜ್ಜೆ ಹಾಕಿದರು.ರಾಜ್ಯಸರ್ಕಾರ ರೈತರ ಪ್ರತಿಭಟನೆಗೆ ಬೆಲೆ ನೀಡದೆ ಸರ್ವಾಧಿಕಾರಿ ರೀತಿಯಲ್ಲಿ ವರ್ತಿಸುತ್ತಿದೆ. ರೈತರನ್ನು ಬೆದರಿಸುತ್ತಾ ಇಡೀ ಸರ್ಕಾರ ಬಲವನ್ನು ದುರುಪಯೋಗ ಪಡಿಸಿಕೊಂಡು ಬಡ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
ಟೌನ್ ಶಿಪ್ ಯೋಜನೆ ರಿಯಲ್ ಎಸ್ಟೇಟ್ ಹಿತಾಸಕ್ತಿಯ ಕಾರ್ಪೋರೇಟ್ ಭೂ ಕಬಳಿಕೆ ಉದ್ದೇಶವಾಗಿದೆ. ಇದನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಕೇವಲ ಭೂಮಿಗಾಗಿ ನಡೆಸುತ್ತಿರುವ ಹೋರಾಟವಾಗದೆ ಇಡೀ ದೇಶಧ ಆಹಾರ ಭದ್ರತೆ ಹಾಗೂ ರೈತಾಪಿ ಕೃಷಿ ಉಳಿವಿಗಾಗಿ ಮತ್ತು ಜೀವ ಪರಿಸರ ಸುಸ್ತಿರಕ್ಕಾಗಿ ನಡೆಸುತ್ತಿರುವ ಹೋರಾಟವಾಗಿದೆ. ಸರ್ಕಾರ ಯೋಜನೆ ಕೈಬಿಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.ಬೈರಮಂಗಲ ವೃತ್ತದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕಿಸಾನ್ ಸಭಾ ರಾಷ್ಟ್ರೀಯ ಸಹ ಕಾರ್ಯದರ್ಶಿ ಡಿ.ರವಿಂದ್ರನ್ , ಕಳೆದ 438 ದಿನಗಳಿಂದ ರೈತರು ರಾತ್ರಿ ಹಗಲು ಎನ್ನದೆ ಹೋರಾಟ ನಡೆಸುತ್ತಿದ್ದಾರೆ. ಪಂಚೇಂದ್ರಿಯಗಳನ್ನು ಕಳೆದುಕೊಂಡಿರುವ ರಾಜ್ಯ ಸರ್ಕಾರಕ್ಕೆ ರೈತರ ಸಂಕಷ್ಟ ಗೊತ್ತಾಗುತ್ತಿಲ್ಲ. ಈ ಸರ್ಕಾರವನ್ನು ಎಚ್ಚರಿಸಲು ಹೋರಾಟವನ್ನು ಬೈರಮಂಗಲ ವೃತ್ತದಿಂದ ವಿಧಾನಸೌಧಕ್ಕೆ ಸ್ಥಳಾಂತರ ಮಾಡೋಣ ಎಂದು ಹೇಳಿದರು.ಬಿಡದಿಯಿಂದ ವಿಧಾನಸೌಧ ಚಲೋ ಹೋರಾಟದಲ್ಲಿ ಕನಿಷ್ಠ 5 ಸಾವಿರ ರೈತರಾದರು ಭಾಗಿಯಾಗಬೇಕು. ಈಗಾಗಲೇ ಯೋಜನೆ ವಿರೋಧಿಸಿರುವ 3 ಸಾವಿರ ರೈತರಿದ್ದು, ಅವರೊಂದಿಗೆ ನಾವು 2 ಸಾವಿರ ರೈತರನ್ನು ಕರೆತರುತ್ತೇವೆ. ರಾಜ್ಯಸರ್ಕಾರವೇ ವಿಧಾನಸೌಧದ ಮೆಟ್ಟಿಲು ಇಳಿದು ಬರುವಂತೆ ಹೋರಾಟ ನಡೆಸೋಣ ಎಂದರು.
ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ವರಲಕ್ಷಿ÷್ಮ ಮಾತನಾಡಿ, ಸರ್ಕಾರ ಅಭಿವೃದ್ಧಿ ಹೆಸರಿನಲ್ಲಿ ರೈತರ ಘನತೆ ಮತ್ತು ಸಮಾನತೆಯ ಬದುಕಿಗೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದೆ. ಅಭಿವೃದ್ಧಿ ಜನರಿಗಾಗಿ ಇರಬೇಕು. ಆದರೆ, ಸರ್ಕಾರ ರೈತರನ್ನು ದೂರವಿಟ್ಟು ಬಂಡವಾಳ ಶಾಹಿಗಳ ಅಭಿವೃದ್ಧಿ ಮಾಡಲು ಹೊರಟಿದೆ ಎಂದು ಟೀಕಿಸಿದರು.
ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಹೆಸರಿನಲ್ಲಿ ರಾಜ್ಯ ಸರ್ಕಾರ ಕೆಐಎಡಿಬಿ ಮೂಲಕ ರಾಜ್ಯದಲ್ಲಿ 1 ಲಕ್ಷ 62 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದೆ. ಇದರಲ್ಲಿ ಸಾಕಷ್ಟು ಭೂಮಿ ಖಾಲಿ ಬಿದ್ದಿದೆ. ಹೀಗಿರುವಾಗ ಅಭಿವೃದ್ಧಿ ಹೆಸರಿನಲ್ಲಿ ಬೈರಮಂಗಲ - ಕಂಚುಗಾರನಹಳ್ಳಿ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಹೊಸ ಅಧಿಸೂಚನೆ ಏಕೆ ಹೊರಡಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು.ಕರ್ನಾಟಕ ಪ್ರಾಂತ ರೈತಸಂಘ ರಾಜ್ಯಾಧ್ಯಕ್ಷ ಯು.ಬಸವರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ , ಸಹ ಕಾರ್ಯದರ್ಶಿ ಎನ್.ಭರತ್ ರಾಜ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಲ್.ಅಂಕಪ್ಪ, ರೈತ ಹೋರಾಟಗಾರ್ತಿ ಪ್ರಭಾ ಬೆಳವಾಡಿ, ಬೈರಮಂಗಲ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ರೈತರ ಭೂ ಹಿತರಕ್ಷಣಾ ಸಂಘ ಅಧ್ಯಕ್ಷ ರಾಮಯ್ಯ, ಮುಖಂಡರಾದ ಪ್ರಕಾಶ್ , ನಾಗರಾಜು, ಶ್ರೀನಿವಾಸರೆಡ್ಡಿ, ಕೃಷ್ಣ, ಮಂಜುನಾಥ್, ಕುಮಾರಸ್ವಾಮಿ, ಚೀಲೂರು ಮುನಿರಾಜು, ರೈತ ಮಹಿಳೆಯರಾದ ಭಾಗ್ಯ ನಾಗರಾಜು, ಜಯಮ್ಮ, ಸುಮಾ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು