LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೈಕೋ ಥ್ರಿಲ್ಲರ್ ಚಿತ್ರಕ್ಕೆ ಪುನೀತ್ ಆ್ಯಕ್ಷನ್ ಕಟ್

ಬೆಳ್ಳಿತೆರೆ ಮೇಲೂ ಜೋಡಿಯಾಗಿ ಚಂದನ್ ಶೆಟ್ಟಿ-ನಿವೇದಿತಾಗೌಡಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ದಂಪತಿ ಇದೇ ಮೊದಲಬಾರಿಗೆ ಬೆಳ್ಳಿತೆರೆಯ ಮೇಲೂ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಪುನೀತ್ ಶ್ರೀನಿವಾಸ್ ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ, ಶಿವಣ್ಣ, ಸುದೀಪ್ ರಂಥ ಸ್ಟಾರ್ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ ನಂದಕಿಶೋರ್ ಅವರಬಳಿ ಅಧ್ಯಕ್ಷದಿಂದ ಟಗರು ಚಿತ್ರದವರೆಗೆ (ತೆಲುಗು ಸಿನಿಮಾ ಸೇರಿ) ಸುಮಾರು 12 ವರ್ಷಗಳ ಕಾಲ ಕೆಲಸ ಮಾಡಿ ನಿರ್ದೇಶನದ ಪಾಠ ಕಲಿತು ಇದೀಗ ಮೊದಲಬಾರಿಗೆ ನಿರ್ದೇಶನಕ್ಕಿಳಿಯುತ್ತಿದ್ದಾರೆ.

ಅವರು ತಮ್ಮ ಪ್ರಥಮ ಪ್ರಯತ್ನದಲ್ಲೇ ವಿಭಿನ್ನ ಕಾನ್ಸೆಪ್ಟ್ ಮೂಲಕ ತಮ್ಮ ಹೊಸ ಜರ್ನಿಯನ್ನು ಆರಂಭಿಸುತ್ತಿದ್ದಾರೆ.
ಇನ್ನೂ ಹೆಸರಿಡದ ಈ ಚಿತ್ರಕ್ಕೆ ಶ್ರೀ ಚೌಡೇಶ್ಬರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ದೊಡ್ಡ ಮಟ್ಟದ ಬಂಡವಾಳ ಹೂಡುತ್ತಿದ್ದಾರೆ.

ಎಂ.ಎಸ್.ತ್ಯಾಗರಾಜ್ ಅವರ ಸಂಗೀತ ಸಂಯೋಜನೆ, ಕರುಣಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮುಂದಿನ ತಿಂಗಳಿಂದ ಆರಂಭಿಸಿ ಬಹುತೇಕ ಬೆಂಗಳೂರು ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆ ಚಿತ್ರತಂಡಕ್ಕಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಮಹೂರ್ತದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ನಿರ್ದೇಶಕ ಪುನೀತ್ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು