LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಐಎಸ್‍ಎಲ್: ಇಂದು ಬಿಎಫ್‍ಸಿಗೆ ಪಂಜಾಬ್ ಸವಾಲು

ಬೆಂಗಳೂರು: ಇಂಡಿಯನ್ ಸೂಪರ್ ಲೀಗ್ (ಐಎಸ್‍ಎಲ್) ಫುಟ್‍ಬಾಲ್ ಟೂರ್ನಿಯ ಪಂದ್ಯದಲ್ಲಿ ಬೆಂಗಳೂರು ಎಫ್‍ಸಿ ತಂಡದವರು ಗುರುವಾರ ತವರಿನಲ್ಲಿ ಪಂಜಾಬ್ ಎಫ್‍ಸಿ ತಂಡವನ್ನು ಎದುರಿಸಲಿದ್ದು, ಗೆಲುವಿನ ವಿಶ್ವಾಸದಲ್ಲಿದ್ದಾರೆ.

ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಬಿಎಫ್‍ಸಿ ತಂಡ ಈ ಋತುವಿನ ಎರಡನೇ ಜಯದ ನಿರೀಕ್ಷೆಯಲ್ಲಿದ್ದರೆ, ಪಂಜಾಬ್ ತಂಡ ಮೊದಲ ಗೆಲುವು ದಕ್ಕಿಸುವ ತವಕದಲ್ಲಿದೆ. ಏಳು ಪಂದ್ಯಗಳನ್ನು ಆಡಿರುವ ಸುನಿಲ್ ಚೆಟ್ರಿ ಬಳಗ ಒಂದರಲ್ಲಿ ಗೆಲುವು ಸಾಧಿಸಿದ್ದರೆ, ಮೂರು ಪಂದ್ಯಗಳಲ್ಲಿ ಡ್ರಾ ಸಾಧಿಸಿದೆ. ಉಳಿದ ಮೂರು ಪಂದ್ಯಗಳಲ್ಲಿ ಪರಾಭವಗೊಂಡಿದೆ.

ಒಟ್ಟು 7 ಅಂಕದೊಂದಿಗೆ ಬಿಎಫ್‍ಸಿ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಪಂಜಾಬ್ ತಂಡ ಆಡಿರುವ ಏಳು ಪಂದ್ಯಗಳಲ್ಲಿ ಮೂರರಲ್ಲಿ ಡ್ರಾ ಸಾಧಿಸಿದ್ದರೆ, ಉಳಿದ ನಾಲ್ಕು ಪಂದ್ಯಗಳಲ್ಲಿ ಸೋತಿದೆ. 3 ಅಂಕದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ (12ನೇ) ಸ್ಥಾನದಲ್ಲಿದೆ.

ಸೈಮನ್ ಗ್ರೇಸನ್ ಮಾರ್ಗದರ್ಶನದ ಬೆಂಗಳೂರು ಎಫ್‍ಸಿ ತನ್ನ ಕೊನೆಯ ನಾಲ್ಕು ಪಂದ್ಯಗಳಿಂದ ಕೇವಲ ಮೂರು ಅಂಕಗಳನ್ನು ಗಳಿಸುವ ಮೂಲಕ ನಿರಾಸೆ ಅನುಭವಿಸಿದ್ದು, ಮತ್ತೆ ಪುಟಿದೇಳುವ ಹುಮ್ಮಸ್ಸಿನಲ್ಲಿದೆ.‘ಐ- ಲೀಗ್‍ನಿಂದ ಐಎಸ್‍ಎಲ್‍ಗೆ ಪರಿವರ್ತನೆಗೊಳ್ಳುವಲ್ಲಿ ನಾವು ಕೆಲ ತೊಂದರೆ ಎದುರಿಸಿದ್ದೇವೆ. ಅದು ಫಲಿತಾಂಶದಲ್ಲಿ ಕಾಣಿಸುತ್ತಿದೆ.

ಹಿಂದಿನ ಪಂದ್ಯಗಳ ತಪ್ಪುಗಳನ್ನು ತಿದ್ದಿಕೊಂಡು ಗೆಲುವಿನ ಲಯಕ್ಕೆ ಮರಳುತ್ತೇವೆ’ ಎಂದು ಪಂಜಾಬ್‍ನ ಮುಖ್ಯ ಕೋಚ್ ಸ್ಟೇಕೋಸ್ ವರ್ಗೆಟಿಸ್ ವಿಶ್ವಾಸ ವ್ಯಕ್ತಪಡಿಸಿದರು.

ಪಂದ್ಯ ಆರಂಭ: ರಾತ್ರಿ 8, ನೇರ ಪ್ರಸಾರ: ಸ್ಪೋರ್ಟ್ಸ್ 18 ನೆಟ್‍ವರ್ಕ್, ಜಿಯೊ ಸಿನೆಮಾ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು