ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಧಿಕ ಭಾರ, ಅತಿವೇಗ ಹಾಗೂ ಅಕ್ರಮ ಗಣಿಗಾರಿಕೆ ಮತ್ತು ಖನಿಜ ಸಾಗಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅನುಮತಿಗಿಂತ ಹೆಚ್ಚಿನ ಭಾರವನ್ನು ತುಂಬಿಕೊAಡು ಸಾಗಾಟ ಮಾಡುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ತಪಾಸಣೆ ನಡೆಸಿ, ನಿಯಮ ಉಲ್ಲಂಘಿಸುವ ವಾಹನಗಳನ್ನು ಜಪ್ತಿ ಮಾಡಿ ದಂಡ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕ ಭಾರ ಸಾಗಾಟ ನಿಯಂತ್ರಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮರಳು, ಜೆಲ್ಲಿ ಸೇರಿದಂತೆ ವಿವಿಧ ಗಣಿಗಾರಿಕೆ ಉತ್ಪನ್ನಗಳನ್ನು ಸಾಗಿಸುವ ವಾಹನಗಳು ನಿಗದಿತ ನಿಯಮಗಳನ್ನು ಪಾಲಿಸದೆ ಸಂಚರಿಸುತ್ತಿರುವುದರಿಂದ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುತ್ತಿದ್ದು, ಇಂತಹ ಘಟನೆಗಳನ್ನು ತಡೆಗಟ್ಟಲು ಸಾರಿಗೆ, ಗಣಿ ಮತ್ತು ಭೂ ವಿಜ್ಞಾನ, ಕಂದಾಯ, ಪರಿಸರ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು ಜಿಲ್ಲೆಯಲ್ಲಿ ಅಧಿಕ ಭಾರ ಸಾಗಾಟ ಮತ್ತು ಅಕ್ರಮ ಗಣಿಗಾರಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಸದರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಇಂದಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಕೂಡಲೇ ಕಾರ್ಯಾಚರಣೆ ಆರಂಭಿಸಬೇಕು. ಗಣಿಗಾರಿಕೆ ನಡೆಯುತ್ತಿರುವ ತಾಲ್ಲೂಕುಗಳಲ್ಲಿ ಹಾಗೂ ಖನಿಜ ಸಾಗಾಟ ಹೆಚ್ಚಿರುವ ಪ್ರಮುಖ ಸ್ಥಳಗಳಲ್ಲಿ ವಾಹನಗಳನ್ನು ನಿರಂತರವಾಗಿ ತಪಾಸಣೆ ಮಾಡಬೇಕು. ಪ್ರತಿದಿನ ನಡೆಸುವ ಕಾರ್ಯಾಚರಣೆಯ ವಿವರ, ನಿಯಮ ಉಲ್ಲಂಘಿಸಿದ ವಾಹನಗಳ ಸಂಖ್ಯೆ, ವಿಧಿಸಿದ ದಂಡ ಹಾಗೂ ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮರಳು ಸಾಗಾಟ ಮಾಡುವ ವಾಹನಗಳು ಮರಳಿನ ಮೇಲೆ ಶೇಡ್ ನೆಟ್ (ನೆರಳು ಬಲೆ) ಹಾಕಿಕೊಂಡು ಸಾಗಾಟ ಮಾಡುತ್ತಿರುವುದು ನಿಯಮಬಾಹಿರವಾಗಿದ್ದು, ಅದರ ಬದಲಾಗಿ ನಿಗದಿತ ದಪ್ಪದ ಟಾರ್ಪಲ್‌ಗಳನ್ನು ಕಡ್ಡಾಯವಾಗಿ ಬಳಸಬೇಕು. ಸಾಗಾಟದ ಸಂದರ್ಭದಲ್ಲಿ ಮರಳು ಮತ್ತು ಇತರೆ ಖನಿಜಗಳು ರಸ್ತೆಗೆ ಚೆಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ವಾಹನಗಳಲ್ಲಿ ಅನುಮತಿಗಿಂತ ಹೆಚ್ಚಿನ ಪ್ರಮಾಣದ ಖನಿಜಗಳನ್ನು ಸಾಗಿಸಬಾರದು ಎಂದರು.ವಾಹನಗಳ ತಪಾಸಣೆ ಸಂದರ್ಭದಲ್ಲಿ ಸರ್ಕಾರಕ್ಕೆ ರಾಯಲ್ಟಿ ಪಾವತಿಸಿರುವ ರಸೀದಿ, ಖನಿಜ ಸಾಗಾಟಕ್ಕೆ ನೀಡಿರುವ ಅಧಿಕೃತ ಅನುಮತಿ ಪತ್ರ, ವಾಹನದ ಭಾರ ಹಾಗೂ ವೇಗದ ಮಿತಿಯನ್ನು ಪರಿಶೀಲಿಸಬೇಕು. ಸರ್ಕಾರದ ನಿಯಮಗಳು ಮತ್ತು ಸಂಚಾರಿ ನಿಯಮಗಳನ್ನು ಪಾಲಿಸುವ ವಾಹನಗಳಿಗೆ ಮಾತ್ರ ಸಾಗಾಟಕ್ಕೆ ಅವಕಾಶ ನೀಡಬೇಕು. ನಿಯಮ ಉಲ್ಲಂಘಿಸುವ ವಾಹನಗಳನ್ನು ಜಪ್ತಿ ಮಾಡಿ ನಿಗದಿತ ದಂಡ ವಿಧಿಸಬೇಕು. ಪದೇಪದೇ ನಿಯಮ ಉಲ್ಲಂಘಿಸುವ ವಾಹನಗಳನ್ನು ಕಪುö್ಪಪಟ್ಟಿಗೆ ಸೇರಿಸಿ, ಅವುಗಳ ಪರವಾನಗಿ ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು. ಜಪ್ತಿ ಮಾಡಿದ ವಾಹನಗಳು ಮತ್ತು ಖನಿಜ ಉತ್ಪನ್ನಗಳನ್ನು ಸುರಕ್ಷಿತವಾಗಿಡಲು ಸೂಕ್ತ ಸ್ಥಳವನ್ನು ಗುರುತಿಸುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದರು. ಗಣಿಗಾರಿಕೆ ನಡೆಸಲು ಪರಿಸರ ಇಲಾಖೆಯಿಂದ ನೀಡಲಾಗುವ ಅನುಮತಿ ಪತ್ರದಲ್ಲಿನ ಸುರಕ್ಷತಾ ಕ್ರಮಗಳು ಹಾಗೂ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸುವ ಕ್ವಾರಿಗಳ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪರಿಸರ ಅಧಿಕಾರಿಗೆ ತಾಕೀತು ಮಾಡಿದರು. ಜಿಲ್ಲೆಯಲ್ಲಿ ಗಣಿಗಾರಿಕೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಸಂಬAಧ ಒಂದು ವಾರದೊಳಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಗಣಿಗಾರಿಕೆಯಲ್ಲಿ ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಬಹುದು. ಧೂಳು ಮತ್ತು ಪರಿಸರ ಮಾಲಿನ್ಯದಿಂದ ಶ್ವಾಸಕೋಶ ಸಂಬAಧಿ ಕಾಯಿಲೆಗಳು ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜನರ ಜೀವದೊಂದಿಗೆ ಚೆಲ್ಲಾಟವಾಡದೆ, ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಸುರೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜ ನಾಯ್ಕ, ಜಿಲ್ಲಾ ಪರಿಸರ ಅಧಿಕಾರಿ ಮೀನಾಕ್ಷಮ್ಮ, ತಹಶೀಲ್ದಾರ್ ರಶ್ಮಿ, ಮಹೇಶ್ ಪತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.