LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಗ್ರಾಮೀಣ ಭಾಗದಲ್ಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ

ಕೆಜಿಎಫ್: ಗ್ರಾಮೀಣ ಭಾಗದ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಶಾಸಕಿ ಎಂ. ರೂಪಕಲಾ ಅವರು ಕ್ಷೇತ್ರದ ವಿವಿಧ ಗ್ರಾಮೀಣ ಭಾಗಗಳಲ್ಲಿ ಹಮ್ಮಿಕೊಂಡಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕೃತವಾಗಿ ಭೂಮಿ ಪೂಜೆ ನೆರವೇರಿಸಿದರು. ಒಟ್ಟು 1 ಕೋಟಿ 44 ಲಕ್ಷ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ರಸ್ತೆಗಳನ್ನು ಸಿಸಿ ರಸ್ತೆಗಳನ್ನಾಗಿ ನಿರ್ಮಾಣ ಮಾಡಲು ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಜಕ್ಕರಸನಕುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಜಿ.ಎಫ್.-ಶಾಂತಿಪುರA ಮುಖ್ಯ ರಸ್ತೆಯಿಂದ ಬಿ.ಕೊತ್ತೂರು ಗ್ರಾಮಕ್ಕೆ ಹೋಗುವ ರಸ್ತೆ ಕಾಮಗಾರಿಯನ್ನು 27 ಲಕ್ಷ ರೂಪಾಯಿ ವೆಚ್ಚದಲ್ಲಿ ಹಾಗೂ ಸಂಗನಹಳ್ಳಿ ಗ್ರಾಮದಿಂದ ಏತೂರು ಗ್ರಾಮದವರೆಗಿನ ರಸ್ತೆ ಕಾಮಗಾರಿಯನ್ನು 24 ಲಕ್ಷ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿಯ ಆರ್.ಆರ್. ಮುಖ್ಯ ರಸ್ತೆಯಿಂದ ಕರಡಗೂರು ಮಾರ್ಗವಾಗಿ ಗಂಗಾಪುರ ಗ್ರಾಮಕ್ಕೆ ಹೋಗುವ ರಸ್ತೆಯನ್ನು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ.
ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರ್.ಆರ್. ರಸ್ತೆಯಿಂದ ಬಿಲ್ಲೇರಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಕಾಮಗಾರಿಗೆ 18 ಲಕ್ಷ ರೂಪಾಯಿ ಹಾಗೂ ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿಯ ಚಿಂಚಾAಡ್ಲಹಳ್ಳಿ ಗ್ರಾಮದಿಂದ ಚೌಡೇನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ನಿರ್ಮಾಣ ಕಾಮಗಾರಿಗೆ 25 ಲಕ್ಷ ರೂಪಾಯಿಗಳನ್ನು ನಿಯೋಜಿಸಿ ಚಾಲನೆ ನೀಡಲಾಗಿದೆ. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು, ಕಳೆದ ದಿನಗಳಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ಗ್ರಾಮೀಣ ಭಾಗದ ರಸ್ತೆಗಳು ಸಾಕಷ್ಟು ಹಾನಿಗೊಳಗಾಗಿದ್ದವು. ಇದನ್ನು ಮನಗಂಡು ಮಾನ್ಯ ಮುಖ್ಯಮಂತ್ರಿಗಳು 2024-25ನೇ ಸಾಲಿನಲ್ಲಿ ವಿಶೇಷವಾಗಿ 10 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಶೇಷ ಅನುದಾನದಡಿ ಗ್ರಾಮೀಣ ಭಾಗದಲ್ಲಿ ಹಳ್ಳಿಯಿಂದ ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಗುಣಮಟ್ಟದ ಸಿಸಿ ರಸ್ತೆಗಳನ್ನಾಗಿ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.ಕ್ಷೇತ್ರದಲ್ಲಿ ಸಾರ್ವಜನಿಕರು, ವಿಶೇಷವಾಗಿ ರೈತರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಕೂಲಿ ಕಾರ್ಮಿಕರು ದಿನನಿತ್ಯ ಹೆಚ್ಚಾಗಿ ಸಂಚರಿಸುವ ರಸ್ತೆಗಳ ಅಭಿವೃದ್ಧಿಗೆ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು. ಇದೇ ವೇಳೆ, ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂಚಾಂಡ್ಲಹಳ್ಳಿ ಗ್ರಾಮದಿಂದ ಚೌಡೇನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಕಾಮಗಾರಿಗೆ ಪಕ್ಕದ ಜಮೀನಿನ ಮಾಲೀಕರು ಆಕ್ಷೇಪಣೆ ವ್ಯಕ್ತಪಡಿಸಿದ ಘಟನೆ ನಡೆಯಿತು. ಈ ಕುರಿತು ಪ್ರತಿಕ್ರಿಯಿಸಿದ ಶಾಸಕರು, ರಸ್ತೆ ಎಂಬುದು ಪ್ರತಿಯೊಬ್ಬ ನಾಗರಿಕನಿಗೂ ಅತ್ಯಾವಶ್ಯಕವಾಗಿದೆ. ಹೀಗಾಗಿ ಗ್ರಾಮದ ಹಿರಿಯ ಮುಖಂಡರೆಲ್ಲರೂ ಒಟ್ಟಾಗಿ ಕುಳಿತು, ಆಕ್ಷೇಪಣೆ ಎತ್ತಿರುವ ರೈತರ ಮನವೊಲಿಸಿ, ಅವರ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು. ಯಾರಿಗೆ ಒಬ್ಬರಿಗೂ ತೊಂದರೆಯಾಗದAತೆ ರಸ್ತೆ ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗುವುದು ಎಂದು ಸ್ಥಳದಲ್ಲೇ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ. ನಾರಾಯಣ ಸ್ವಾಮಿ, ಎಪಿಎಂಸಿ ಅಧ್ಯಕ್ಷ ವಿಜಯ ರಾಘವ ರೆಡ್ಡಿ, ಉಪಾಧ್ಯಕ್ಷ ಆನಂದ ಮೂರ್ತಿ, ಗ್ರಾಪಂ ಮಾಜಿ ಅಧ್ಯಕ್ಷರಾದ ಸುನೀತ ಆನಂದ್ ರೆಡ್ಡಿ, ಗೀತಕಲಾ ವೆಂಕಟೇಶ್, ಜಯರಾಮ್ ರೆಡ್ಡಿ, ತಾಪಂ ಮಾಜಿ ಅಧ್ಯಕ್ಷ ರಾಮಕೃಷ್ಣ ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಮ್ಮಸಂದ್ರ ನಾಗರಾಜ್, ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಧಕೃಷ್ಣ ರೆಡ್ಡಿ, ಮುಖಂಡರಾದ ಪ್ರಕಾಶ್ ರೆಡ್ಡಿ, ಪದ್ಮನಾಭ ರೆಡ್ಡಿ, ಸುಬ್ಬಾರೆಡ್ಡಿ, ಜಯರಾಮ್ ರೆಡ್ಡಿ, ಏತೂರು ಚಂದ್ರಶೇಖರ್, ಅರುಣ್ ರೆಡ್ಡಿ, ನರೇಂದ್ರ ರೆಡ್ಡಿ, ಸನಾವುಲ್ಲ, ರವಿ, ಶ್ಯಾಮಲಮ್ಮ, ಶ್ರೀನಿವಾಸ್ ರೆಡ್ಡಿ, ಕ್ಯಾಸಂಬಳ್ಳಿ ಪ್ರತಾಪ್, ಗೋಪಾಲ್, ತಾಪಂ ಮಾಜಿ ಸದಸ್ಯ ಬಾಬು, ಗಿರಿಜಮ್ಮ, ಎಪಿಎಂಸಿ ನಿರ್ದೇಶಕಿ ಯಶೋಧಮ್ಮ, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸಕ್ಲೆöÊನ್, ಬೇತಮಂಗಲ ಹೋಬಳಿಯ ಅಧ್ಯಕ್ಷ ಸತೀಶ್ ಹಾಗೂ ವಿವಿಧ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು