LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಶೀಘ್ರ ಸಮಸ್ಯೆಗಳ ಪರಿಹಾರ ವಿಜಯೇಂದ್ರ

ಬೆಂಗಳೂರು: ಪಕ್ಷದಲ್ಲಿ ಕಾಣಿಸಿಕೊಂಡಿರುವ ಶಿವಮೊಗ್ಗವೂ ಸೇರಿದಂತೆ ಎಲ್ಲ ಸಮಸ್ಯೆಗಳೂ ಶೀಘ್ರ ಪರಿಹಾರವಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿ-ಗಳ ಜೊತೆ ಮಾತನಾಡಿದ ಅವರು, ಕೇಂದ್ರದಲ್ಲಿ
ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು ಪ್ರಧಾನಿ ಆಗುವುದು ಖಚಿತ-ವಾಗಿರುವ ಕಾರಣ ಬಿಜೆಪಿಗೆ ಟಿಕೆಟ್ ಆಕಾಂಕ್ಷಿ-ಗಳು ಹೆಚ್ಚಾಗಿದ್ದಾರೆ. ರಾಜ್ಯದಲ್ಲಿ ಕೆಲವೊಂದು ಸಮಸ್ಯೆಗಳಿದ್ದು, ಅವು ಶೀಘ್ರವೇ ಬಗೆಹರಿಯಲಿವೆ ಎಂದು ಅಭಿಪ್ರಾಯಪಟ್ಟರು.

ಕೆ.ಎಸ್.ಈಶ್ವರಪ್ಪ ಅವರ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ನಮ್ಮದೊಂದು ರಾಷ್ಟ್ರೀಯ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದರೂ ಬಿಜೆಪಿ ಗೆಲ್ಲುವ ನಿರೀಕ್ಷೆಯಿಂದ ಆಕಾಂಕ್ಷಿಗಳೂ ಹೆಚ್ಚಾಗಿದ್ದಾರೆ. ದಾವಣಗೆರೆ ಮತ್ತು ಬೆಳಗಾವಿಗೆ ನಮ್ಮ ರೈತ ನಾಯಕರಾದ ಯಡಿಯೂರಪ್ಪನವರು ಭೇಟಿ ಕೊಟ್ಟು ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಈಶ್ವರಪ್ಪನವರ ಸಮಸ್ಯೆಯೂ ಬಗೆಹರಿಯಲಿದೆ ಎಂದು ನುಡಿದರು.

ನಮ್ಮ ಪಕ್ಷದ ಕೇಂದ್ರದ ನಾಯಕತ್ವವು ಕೇವಲ ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರ ಮಾತು ಕೇಳಿ ತೀರ್ಮಾನ ಮಾಡುವುದಿಲ್ಲ. ಒಂದು ಬಲಿಷ್ಠ ನಾಯಕತ್ವ ನಮ್ಮ ಕೇಂದ್ರದಲ್ಲಿದೆ. ಬಲಿಷ್ಠ ನಾಯಕರಾದ ಮೋದಿಜೀ, ನಡ್ಡಾಜೀ, ಅಮಿತ್ ಶಾ ಜೀ ಅವರಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿ ಎಲ್ಲ ನಾಯಕರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಚುನಾವಣೆ ಫಲಿತಾಂಶ ಬಂದಾಗ ಯಾರೆಲ್ಲ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ.ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.ನರೇಂದ್ರ ಮೋದಿಯವರ ಪರ ಅಲೆ, ಬಿಜೆಪಿ ಪರ ಅಲೆಯೇ ಇದಕ್ಕೆ ಕಾರಣ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು