LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸದ್ದಿಲ್ಲದೆ `ಕಮಲ' ಸಂಘಟನೆ ರಾಷ್ಟ್ರೀಯ ಅಧ್ಯಕ್ಷರ ಸ್ವಾಗತಕ್ಕೂ ಮಿತವ್ಯಯ ಬಳಕೆ ಬಿಸಿ

ಬೆಂಗಳೂರು: ಬಿಜೆಪಿ ಪಕ್ಷ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ವೇಳೆಗೆ ತನ್ನ ಸಂಘಟನೆಯನ್ನು ಬಲಪಡಿಸಿ ಅಧಿಕಾರಕ್ಕೆ ಬರಲು ಸಿದ್ಧತೆ ಆರಂಭಿಸಿದೆ. ಯಾವುದೇ ಸದ್ದುಗದ್ದಲವಿಲ್ಲದೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಪ್ರಾಥಮಿಕ ಹಂತದ ಕಾರ್ಯದ ರೂಪುರೇಷೆಗಳನ್ನು ಸಿದ್ಧಪಡಿಸಲು ಮುಂದಾಗಿದೆ.ಈ ತಿಂಗಳ 23ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ವಾಗತಕ್ಕೆ ಯಾವುದೇ ರೀತಿಯ ಆಡಂಬರ ಹಾಗೂ ಸಂಭ್ರಮದ ಚಟುವಟಿಕೆಗಳನ್ನು ನಡೆಸದಂತೆ ರಾಜ್ಯ ಬಿಜೆಪಿ ನಾಯಕರಿಗೆ ಸೂಚಿಸಿದೆ. ಈ ತಿಂಗಳ 23ರ ರಾತ್ರಿ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಭೇಟಿ ನೀಡಲಿದ್ದಾರೆ. ಅವರ ಸ್ವಾಗತವನ್ನು ಅದ್ಧೂರಿಯಾಗಿ ಏರ್ಪಡಿಸಲು ಸಿದ್ಧತೆ ನಡೆಸಲಾಗಿತ್ತು. ಈಗ ಅದೆಲ್ಲದಕ್ಕೂ ಕಡಿತ ಮಾಡಿರುವ ರಾಷ್ಟ್ರೀಯ ಮುಖಂಡರು ಕೇವಲ ಬಿಜೆಪಿ ರಾಜ್ಯಾಧ್ಯಕ್ಷರು ಉಭಯ ಸದನಗಳ ವಿಪಕ್ಷ ನಾಯಕರು ಹಾಗೂ ಸಚೇತಕರು ಸೇರಿದಂತೆ ಕೇವಲ ಐದು ಜನರನ್ನು ಮಾತ್ರ ಸ್ವಾಗತ ಕೋರಲು ತೆರಳುವಂತೆ ಸೂಚಿಸಲಾಗಿದೆ.
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ನೇರವಾಗಿ ಅವರ ವಾಸ್ತವ್ಯಕ್ಕೆ ಏರ್ಪಾಡು ಮಾಡಿರುವ ಸ್ಥಳಕ್ಕೆ ನೇರವಾಗಿ ಬರುವ ರಾಷ್ಟ್ರೀಯ ಅಧ್ಯಕ್ಷರು ತಂಗಲಿದ್ದಾರೆ. ಅಂದು ಬೆಳಿಗ್ಗೆ ಮೊದಲಿಗೆ ಮಲ್ಲೇಶ್ವರಂನಲ್ಲಿರುವ ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಪಕ್ಷದ ಶಾಸಕರು ಹಾಗೂ ಪ್ರಮುಖರೊಂದಿಗೆ ಸಮಾಲೋಚನೆ ಸಭೆ ನಡೆಸಲಿದ್ದಾರೆ. ಅದಾದ ನಂತರ ಅವರು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡು ನಂತರ ನಗರದ ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಿರುವ ಉತ್ತರ ಜಿಲ್ಲಾ ಬಿಜೆಪಿ ಘಟಕದ ಪ್ರಶಿಕ್ಷಣ ಶಿಬಿರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಂಜೆಯೇ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಬಿಜೆಪಿ ತನ್ನ ಕಾರ್ಯಕ್ರಮಗಳನ್ನು ಮಿತಬಳಕೆಯಿಂದಲೇ ನಡೆಸಲು ಮುಂದಾಗಿದೆ. ಇಂದು ಸಂಜೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಸಹಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್ ಉಪಾಧ್ಯಕ್ಷ ಬೈಜಯಂತ್ ಪಂಡ ಅವರು ಆಗಮಿಸಲಿದ್ದಾರೆ. ನಾಳೆ ಪಕ್ಷದ ಪ್ರಮುಖ ನಾಯಕರು ಹಾಗೂ ಪಕ್ಷದ ರಾಜ್ಯ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಆ ಸಭೆಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಸಂಬಂಧ ಸಲಹೆ ಅಭಿಪ್ರಾಯಗಳನ್ನು ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಮತ್ತೆ 24-25ರಂದು ರಾಜ್ಯಕ್ಕೆ ಕೇಂದ್ರ ಸಚಿವ ಭೂಪಯ್ಯ ಯಾದವ್ ಹಾಗೂ ಮತ್ತೋರ್ವ ರಾಷ್ಟ್ರೀಯ ಪ್ರಮುಖ ಟಿನ್‌ತುಂಗಾ ಅವರು ಭೇಟಿ ಮಾಡಿ ರಾಜ್ಯಾಧ್ಯಕ್ಷರ ಆಯ್ಕೆ ಸಂಬAಧ ಅಂತಿಮ ರೂಪು ರೇಷೆಗಳನ್ನು ಸಿದ್ದಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು