LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಯುರೋಪಿಯನ್ ಟಿ20 ಲೀಗ್‌ನಲ್ಲಿ ತಂಡ ಖರೀದಿಸಿದ ರಾಹುಲ್ ದ್ರಾವಿಡ್

ನವದೆಹಲಿ: ಭಾರತ ತಂಡದ ಮಾಜಿ ನಾಯಕ ಹಾಗೂ ತರಬೇತುದಾರ ರಾಹುಲ್ ದ್ರಾವಿಡ್ ಯುರೋಪಿಯನ್ ಟಿ20 ಲೀಗ್‌ನ ಉದ್ಘಾಟನಾ ಆವೃತ್ತಿಯ ತಂಡವೊಂದರ ಸಹ ಮಾಲೀಕತ್ವ ವಹಿಸಿಕೊಂಡಿದ್ದಾರೆ.ಅಭಿಷೇಕ್ ಬಚ್ಚನ್ ಸಹ-ಸ್ಥಾಪಕರಾಗಿರುವ ಇಖಿPಐ ಟೂರ್ನಮೆಂಟ್‌ನಲ್ಲಿ, ರಾಹುಲ್ ದ್ರಾವಿಡ್ ಅವರು ಐರ್ಲೆಂಡ್ ಮೂಲದ `ಡಬ್ಲಿನ್ ಗಾರ್ಡಿಯನ್ಸ್' ಫ್ರಾಂಚೈಸಿ ತಂಡವನ್ನು ಖರೀದಿಸಿ ಅದರ ಅಧಿಕೃತ ಮಾಲೀಕರಾಗಿದ್ದಾರೆ. ಆಗಸ್ಟ್ 26 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಡಬ್ಲಿನ್ ಗಾರ್ಡಿಯನ್ಸ್ ತಂಡವನ್ನು ಟೀಮ್ ಇಂಡಿಯಾ ಮಾಜಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಮುನ್ನಡೆಸಲಿದ್ದಾರೆ.ಈ ಹಿಂದೆ ಇವರಿಬ್ಬರು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಜೊತೆಯಾಗಿದ್ದರು. ಈಗ ರಾಹುಲ್ ದ್ರಾವಿಡ್ ಹಾಗೂ ಆರ್ ಅಶ್ವಿನ್ ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ.ಯುರೋಪ್ ರಾಷ್ಟ್ರಗಳಲ್ಲಿ ಕ್ರಿಕೆಟ್ ಪ್ರೋತ್ಸಾಹ ನೀಡಲು ಈ ಟೂರ್ನಿಯನ್ನು ಆಯೋಜಿಸಲಾಗಿದೆ. ಐರ್ಲೆಂಡ್ ಹಾಗೂ ಯುರೋಪಿನಾದ್ಯಂತ ಯುವ ಕ್ರಿಕೆಟಿಗರಿಗೆ ಈ ಟೂರ್ನಿಯಲ್ಲಿ ಅವಕಾಶ ಕಲ್ಪಿಸಲಾಗುತ್ತದೆ.ತಂಡ ಖರೀದಿಸಿದ ನಿರ್ಧಾರದ ಕುರಿತು ಮಾತನಾಡಿರುವ ಟೀಮ್ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್,''ಈ ಟೂರ್ನಿಯತ್ತ ನನ್ನನ್ನು ಆಕರ್ಷಿಸಿದ್ದು, ಅದರ ಹಿಂದಿನ ದೃಷ್ಟಿಕೋನ, ಐರ್ಲೆಂಡ್ ಮತ್ತು ಯುರೋಪಿನಾದ್ಯಂತ ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ಸೃಷ್ಟಿಸುವ ಮೂಲಕ ಯುರೋಪಿನಲ್ಲಿ ಕ್ರಿಕೆಟ್ ಬೆಳೆಯಲು ಸಹಾಯ ಮಾಡುವುದಾಗಿದೆ'' ಎಂದು ಹೇಳಿದರು.``ಡಬ್ಲಿನ್ ತಂಡ ಈಗಾಗಲೇ ಉತ್ಸಾಹ ಭರಿತ ಕ್ರಿಕೆಟ್ ಆಟಗಾರರನ್ನು ಹೊಂದಿದ್ದು, ಅಗಾಧ ಸಾಮರ್ಥ್ಯ ಹೊಂದಿದೆ. ಮುಂದಿನ ಕ್ರಿಕೆಟ್ ಪೀಳಿಗೆಯನ್ನು ಪೋಷಿಸಿವುದು ಮುಖ್ಯ. ಈ ಪ್ರಯತ್ನದಲ್ಲಿ ಇಟಿಪಿಎಲ್ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ನಾನು ಭಾವಿಸುತ್ತೇನೆ'' ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಲೀಗ್‌ನಲ್ಲಿ ಒಟ್ಟು 6 ತಂಡಗಳಿದ್ದು (ಡಬ್ಲಿನ್, ಬೆಲ್‌ಫಾಸ್ಟ್, ಎಡಿನ್‌ಬರ್ಗ್, ಗ್ಲಾಸ್ಗೋ, ರೊಟರ್‌ಡ್ಯಾಮ್ ಮತ್ತು ಆಂಸ್ಟರ್ಡ್ಯಾಮ್) ಕ್ರಿಸ್ ಗೇಲ್, ಸ್ಟೀವ್ ವಾ ಮತ್ತು ಜಾಂಟಿ ರೋಡ್ಸ್ ಅವರಂತಹ ಇತರ ಜಾಗತಿಕ ದಿಗ್ಗಜರು ಸಹ ವಿವಿಧ ತಂಡಗಳ ಮಾಲೀಕರಾಗಿ ಹೂಡಿಕೆ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು