ಬೆಂಗಳೂರು: ದೇಶಾದ್ಯಂತ ಪಾದಯಾತ್ರೆ ಮಾಡಿ ಜನರ ಜ್ವಲಂತ ಸಮಸ್ಯೆ ಎತ್ತಿರೋ ರಾಹುಲ್ ಗಾಂಧಿಯವ್ರೇ ಪ್ರತಿಪಕ್ಷ ನಾಯನಕನಾಗಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
Also read
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಅವರೇ ಪ್ರತಿಪಕ್ಷ ನಾಯಕರಾಗಲಿ ಎಂಬುದು ನಮ್ಮೆಲ್ಲರ ಆಸೆ. ಇದನ್ನು ಇಂಡಿಯಾ ಒಕ್ಕೂಟ ತೀರ್ಮಾನಿಸಲಿದೆ. ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿದ್ದಾರೆ.
ಈ ಮೂಲಕ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿದ್ದಾರೆ. ಇಂಡಿಯಾ ಕೂಟ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಹೇಳಿದ್ದಾರೆ.