LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹಕ್ಕುಗಳಿಗಾಗಿ ಮತ ಚಲಾಯಿಸಿ 6ನೇ ಹಂತದಲ್ಲಿ ಮತದಾನದ ನಂತರ ರಾಹುಲ್ ಹೇಳಿಕೆ

ನವದೆಹಲಿ: ನೀವೆಲ್ಲರೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ನಿಮ್ಮ ಮನೆಗಳಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗಾಗಿ ಮತ್ತು ನಿಮ್ಮ ಕುಟುಂಬದ ಭವಿಷ್ಯಕ್ಕಾಗಿ ಮತ ಚಲಾಯಿಸಬೇಕು ಎಂದು ಎಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಂಬಂಧ ಇಂದು ನಡೆಯುತ್ತಿರುವ 6ನೇ ಹಂತದ ಮತದಾನದ ಹಿನ್ನೆಲೆಯಲ್ಲಿ ಮತಚಲಾಯಿಸಿ ರಾಹುಲ್ ಗಾಂಧಿ, ಪೋಸ್ಟ್ ಮಾಡುವಾಗ ಕೆಲವು ನಿರ್ದಿಷ್ಟ ವಿಷಯಗಳ ಕುರಿತು ಬರೆದುಕೊಂಡಿರುವ ಅವರು, ಇಂದು ಆರನೇ ಹಂತದ ಮತದಾನವಾಗಿದೆ ಮತ್ತು ನಿಮ್ಮ ಪ್ರತಿ ಮತವು 30 ಲಕ್ಷ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಖಚಿತಪಡಿಸುತ್ತದೆ ಮತ್ತು ಯುವಕರಿಗೆ ವರ್ಷಕ್ಕೆ 1 ಲಕ್ಷ ರೂಪಾಯಿಗಳ ಮೊದಲ ಉದ್ಯೋಗ ಖಾತ್ರಿ ಯೋಜನೆಯನ್ನು ಪ್ರಾರಂಭಿಸುತ್ತದೆ ಎಂದು ಹೇಳಿದರು.

ಕೆಲವು ಬಡ ಕುಟುಂಬಗಳ ಮಹಿಳೆಯರ ಖಾತೆಗೆ ತಿಂಗಳಿಗೆ 8,500 ರೂಪಾಯಿ ಬರಲಾರಂಭಿಸಿದೆ ಎಂದು ರಾಹುಲ್ ಗಾಂಧಿ ಹೇಳಿದರು. ರೈತರು ಋಣಮುಕ್ತರಾಗಬೇಕು ಮತ್ತು ಅವರು ತಮ್ಮ ಬೆಳೆಗಳಿಗೆ ಸರಿಯಾದ ಎಂಎಸ್‍ಪಿ ಪಡೆಯಬೇಕು. ಕಾರ್ಮಿಕರಿಗೆ ದಿನಗೂಲಿ ರೂ 400 ಸಿಗಬೇಕು, ನಿಮ್ಮ ಮತವು ನಿಮ್ಮ ಜೀವನವನ್ನು ಸುಧಾರಿಸುವುದಲ್ಲದೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುತ್ತದೆ.

ಪ್ರಜಾಪ್ರಭುತ್ವದ ಈ ಮಹಾನ್ ಹಬ್ಬದಲ್ಲಿ ನಾನು ಮತ್ತು ತಾಯಿ ಮತದಾನದ ಮೂಲಕ ಕೊಡುಗೆ ನೀಡಿದ್ದೇವೆ ಎಂದು ರಾಹುಲ್ ಹೇಳಿದ್ದಾರೆ.ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ, ಪತಿ ರಾಬರ್ಟ್ ವಾದ್ರಾ ಸೇರಿದಂತೆ ಅನೇಕ ಗಣ್ಯರು ದೆಹಲಿಯಲ್ಲಿಂದು ತಮ್ಮ ಮತ ಚಲಾಯಿಸಿದ್ದರೆ. ಮತದಾನದ ನಂತರ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ.

ಇಂದು 6ನೇ ಹಂತದ ಮತದಾನದ ವೇಳೆ ಏಳು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಒಟ್ಟು 58 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಬಿಜೆಪಿಯ ಪ್ರಮುಖರಾದ ಧರ್ಮೇಂದ್ರ ಪ್ರಧಾನ್, ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್, ಮನೇಕಾ ಗಾಂಧಿ, ಜಮ್ಮು ಮತ್ತು ಕಾಶ್ಮೀರದ ಪಿಡಿಪಿ ಮುಖ್ಯಸ್ಥೆ ಮೆಹಬೂಬ್ ಮುಫ್ತಿ, ಕಾಂಗ್ರೆಸ್ ಕನ್ನಯ್ಯಕುಮಾರ್, ದೀಪೇಂದ್ರ ಹೂಡಾ ಸೇರಿದಂತೆ ಹಲವರ ಭವಿಷ್ಯ ಇಂದು ನಿರ್ಧಾರವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು