LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರಾಜ್ಯೋತ್ಸವ ಪ್ರಶಸ್ತಿ ಮತ್ತಷ್ಟು ಸ್ಫೂರ್ತಿ ತುಂಬಿದೆ: ಶೂಟಿಂಗ್ ಸ್ಪರ್ಧಿ ದಿವ್ಯಾ

‘ನನಗಿನ್ನೂ 27 ವರ್ಷ. ಇಷ್ಟು ಚಿಕ್ಕ ವಯಸ್ಸಿನಲ್ಲೇ ಈ ಗೌರವ ಒಲಿದಿದೆ. ನನಗೆ ಲಭಿಸಿದ ಮೊದಲ ಪ್ರಶಸ್ತಿ ಕೂಡ. ಮುಂದಿನ ಗುರಿ ಸಾಧನೆಗೆ ಮತ್ತಷ್ಟು ಸ್ಫೂರ್ತಿ ತುಂಬಿದೆ’ ಎಂದು ಶೂಟಿಂಗ್ ಸ್ಪರ್ಧಿ ದಿವ್ಯಾ ಟಿ.ಎಸ್. ತಿಳಿಸಿದರು.

ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿರುವ ಅವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದವರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಚೀನಾದ ಹಾಂಗ್‍ಝೌನಲ್ಲಿ ಈಚೆಗೆ ಕೊನೆಗೊಂಡ ಏಷ್ಯನ್ ಕ್ರೀಡಾಕೂಟದಲ್ಲಿ ಅವರು ಬೆಳ್ಳಿ ಪದಕ ಗೆದ್ದಿದ್ದರು. ಮಿಕ್ಸೆಡ್ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಜೊತೆಗೂಡಿ ಈ ಸಾಧನೆ ಮಾಡಿದ್ದರು.

‘ಕ್ರೀಡಾಪಟುಗಳ ಸಣ್ಣ ಸಾಧನೆ ಗುರುತಿಸುವುದು ಮುಖ್ಯ. ಏಕೆಂದರೆ ಯಾವುದೇ ಕ್ರೀಡಾಪಟುವಿನ ಸಾಧನೆ ಹಿಂದೆ ಬಹಳ ವರ್ಷಗಳ ಶ್ರಮವಿರುತ್ತದೆ.ಏಕಾಏಕಿ ಪದಕ ಗೆಲ್ಲಲು ಸಾಧ್ಯವಾಗುವುದಿಲ್ಲ. ಈ ಪ್ರಶಸ್ತಿಗೆ ನಾನು ಅರ್ಜಿ ಸಲ್ಲಿಸಿರಲಿಲ್ಲ. ಸರ್ಕಾರವೇ ನನ್ನ ಸಾಧನೆ ಗುರುತಿಸಿದ್ದು ಖುಷಿ ನೀಡಿದೆ’ ಎಂದು ‘ಪ್ರಜಾವಾಣಿ’ ಜೊತೆ ಸಂತಸ ಹಂಚಿಕೊಂಡರು.

ಮೇ ನಲ್ಲಿ ಬಾಕುವಿನಲ್ಲಿ ನಡೆದ ಐಎಸ್‍ಎಸ್‍ಎಫ್ ವಿಶ್ವಕಪ್‍ನ ಮಿಕ್ಸೆಡ್ 10 ಮೀ.ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. 65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‍ಷಿಪ್ ಚಿನ್ನದ ಪದಕ ಹಾಗೂ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು