LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜೂನ್ 26ರಂದು ರಕ್ಷಕ-2 ಬಿಡುಗಡೆ

ಈ ಹಿಂದೆ ಶತದಿನೋತ್ಸವ ಆಚರಿಸಿದ ರಕ್ಷಕ, ದೊಡ್ಡಣ್ಣ ಪುಟ್ಟಣ್ಣ ಚಿತ್ರಗಳ ನಿರ್ದೇಶಕರಾದ ಡಾ. ಆರ್. ವಿಜಯ್ ಕುಮಾರ್ ಅವರು ಇದೀಗ ರಕ್ಷಕ -2 ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಇದು ಅವರ ನಿರ್ದೇಶನದ ಮೂರನೇ ಚಿತ್ರ. 'ರಕ್ಷಕ 2' ಚತ್ರವು ಬರುವ ಶುಕ್ರವಾರ (ಜೂ.26) ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಲವ್, ಆಕ್ಷನ್, ಫ್ಯಾಮಿಲಿ, ಸಸ್ಪೆನ್ಸ್ ಥ್ರಿಲ್ಲರ್, ಕಾಮಿಡಿಯಂಥ ಎಲ್ಲ ಮನರಂಜನಾತ್ಮಕ ಅಂಶಗಳೂ ಈ ಚಿತ್ರದಲ್ಲಿವೆ. ಬೆಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.ಸರ್ವೆ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಶಿವು ಸರ್ವೇಶ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಡಾ. ಆರ್ ವಿಜಯಕುಮಾರ್ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನದ ಜತೆ ಸಂಗೀತ ಸಂಯೋಜನೆಯ ಜವಾಬ್ದಾರಿಯನ್ನೂ ಸಹ ನಿರ್ವಹಿಸಿದ್ದಾರೆ. ವೈಲೆಂಟ್ ವೇಲು ಅವರ ಸಾಹಸ, ವಿಜಯ್ ಮಧಾಳೇ ಅವರ ಛಾಯಾಗ್ರಹಣ ಹಾಗೂ ಸಂಕಲನ ಈ ಚಿತ್ರಕ್ಕಿದೆ. ನಿರ್ದೇಶಕ ಡಾ.ಆರ್ ವಿಜಯ್ ಕುಮಾರ್ ಅವರು ದಕ್ಷ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಸ್ಯನಟ ಲಯಕೋಕಿಲ ಅವರು ಪೊಲೀಸ್ ಕಾನ್ಸ್ಟೆಬಲ್ ಪಾತ್ರ ನಿರ್ವಹಿಸಿದ್ದಾರೆ.ರಾಜವಂಶಿ, ರಾಧಿಕಾ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಉಳಿದ ಪಾತ್ರಗಳಲ್ಲಿ ಮಧುಶ್ರೀ, ಖಳನಾಯಕನಾಗಿ ಹಿರಿಯ ನಟ ಸುರೇಂದ್ರ ಕುಮಾರ್, ಮುರಳಿಕೃಷ್ಣ, ವಿಜಯ್ ಮಧಾಳೇ, ಅರವಿಂದ್, ರೋಹಿಣಿ ನಟಿಸಿದ್ದಾರೆ. ವಿ.ಎಸ್.ಕೆ. ಸಿನಿ ಕ್ರಿಯೇಶನ್ಸ್ ಸಂಸ್ಥೆಯ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು