LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಿರಿಕ್ ಪಾರ್ಟಿ ತಂಡದ ಬ್ಯಾಚುಲರ್ ಪಾರ್ಟಿ ಬ್ಯಾಚುಲರ್ ಪಾರ್ಟಿ ಕೊಡಲು ಮುಂದಾದ ರಕ್ಷಿತ್ ಶೆಟ್ಟಿ!

ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿದ್ದ ಕಿರಿಕ್ ಪಾರ್ಟಿ ತೆರೆಕಂಡು ಬರೋಬ್ಬರಿ ಏಳು ವರ್ಷಗಳಾಗಿವೆ. ಅದರ ಯಶಸ್ಸಿನ ಬಳಿಕ ಇಡೀ ತಂಡ ಬೇರೆ ಬೇರೆ ಪ್ರಾಜೆಕ್ಟ್‍ಗಳಲ್ಲಿ ತೊಡಗಿಸಿಕೊಂಡಿದ್ದು ಗೊತ್ತೇ ಇದೆ. ಇದೀಗ ಅವರೆಲ್ಲರೂ ಮತ್ತಷ್ಟು ಖ್ಯಾತರಾಗಿದ್ದಾರೆ. ಉನ್ನತ ಮಟ್ಟದಲ್ಲಿದ್ದಾರೆ... ಆದರೆ, ಆ ರೀತಿಯ ಯೂತ್ ಕಾಮಿಡಿ ಸ್ಟೋರಿ ಮತ್ತೊಂದು ಬರಲಿಲ್ಲವಲ್ಲ ಎಂಬ ಕೊರಗನ್ನು ನೀಗಿಸಲು ಮತ್ತದೇ ಬರಹಗಾರರ ತಂಡ ಸಜ್ಜಾಗಿದೆ. ಅವರೀಗ ಬ್ಯಾಚುಲರ್ ಪಾರ್ಟಿ ಕೊಡಲು ಸಜ್ಜಾಗಿದ್ದಾರೆ ಎಂಬುದು ವಿಶೇಷ.

ಹೌದು. ಕಿರಿಕ್ ಪಾರ್ಟಿಯ ಬರಹಗಾರ ಅಭಿಜಿತ್ ಮಹೇಶ್, ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, ಬ್ಯಾಚುಲರ್ ಪಾರ್ಟಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಕಚಗುಳಿಯಿಡುವ ಸಂಭಾಷಣೆಗೆ ಖ್ಯಾತರಾಗಿರುವ ಅಭಿ, ತಮ್ಮ ಮೊದಲ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದಕ್ಕೆ ಸಿನಿಮಾ ಬಿಡುಗಡೆಯವರೆಗೂ ಕಾಯಬೇಕು. ಅದಕ್ಕೂ ಮುನ್ನ ಬ್ಯಾಚುಲರ್ ಪಾರ್ಟಿಯ ಮೊದಲ ಝಲಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ದಿಗಂತ್, ಲೂಸ್ ಮಾದ ಯೋಗಿ ಹಾಗೂ ಅಚ್ಯುತ್ ಕುಮಾರ್ ಪೋಸ್ಟರ್‍ನಲ್ಲಿದ್ದಾರೆ. ಅದರ ಹಿನ್ನೆಲೆಯಲ್ಲಿ ಬ್ಯಾಂಕಾಕ್‍ನ ಕೆಲವು ಸ್ಥಳಗಳನ್ನೂ ಕಾಣಬಹುದು. ವೀಲ್‍ಚೇರ್‍ನಲ್ಲಿ ಅಚ್ಯುತ್ ಕುಳಿತುಕೊಂಡಿದ್ದರೆ, ಅವರ ಹಿಂದೆ ಯೋಗಿ, ದಿಗಂತ್ ಓಡಿ ಬರುತ್ತಿರುವ ದೃಶ್ಯ ಸದ್ಯ ಗಮನ ಸೆಳೆಯುತ್ತಿದೆ. ಪೋಸ್ಟರ್‍ನಲ್ಲಿ ಇನ್ನೂ ಗಮನಾರ್ಹ ಅಂಶಗಳಿದ್ದು, ಅವೆಲ್ಲವೂ ಸಿನಿಮಾದ ಕಥೆಗೆ ಪೂರಕವಾಗಿದೆಯಾ ಎಂಬುದಕ್ಕೆ ಚಿತ್ರತಂಡ ಉತ್ತರಿಸಬೇಕಿದೆ. ವಿಶೇಷವೆಂದರೆ ಈಪೋಸ್ಟರ್‍ನ್ನು ಹ್ಯಾಂಡ್ ಸ್ಕೆಚ್ ಮೂಲಕ ಡಿಸೈನ್ ಮಾಡಲಾಗಿದೆ.

ಬರೀ ಪೋಸ್ಟರ್ ಹರಿಬಿಡದೇ ಅದಕ್ಕೊಂದು ಸಣ್ಣ ವೀಡಿಯೋವೊಂದನ್ನು ರಿಲೀಸ್ ಮಾಡಿದೆ. ಅದರಲ್ಲೂ ಕೆಲವು ಅಂಶಗಳು ಗಮನ ಸೆಳೆಯುವಂತಿದ್ದು, ಹಿನ್ನೆಲೆ ಸಂಗೀತವೂ ಅಡಕವಾಗಿದೆ. ಇವೆಲ್ಲವೂ ರೀಲ್ಸ್‍ನಲ್ಲಿ ರಿಲೀಸ್ ಮಾಡಿರುವುದು ಮತ್ತೊಂದು ವಿಶೇಷ. ಕಣ್ಮನ ಸೆಳೆಯುವ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಿರುವ ಚಿತ್ರತಂಡ, ಥಿಯೇಟರ್‍ನಲ್ಲಿ ಇದರ ಅನುಭವ ಪಡೆಯಬೇಕು ಮತ್ತು ಚಿತ್ರಮಂದಿರಗಳಲ್ಲಿ ಕುಳಿತು ನಗೆಗಡಲಲ್ಲಿ ತೇಲುವ ಸಿನಿಮಾ ಇದಾಗಿದೆ ಎಂಬುದು ಚಿತ್ರತಂಡದ ಅನಿಸಿಕೆ.ಪರಂವಃ ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು