LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಗ್ರಾಮದ ಅಭಿವೃದ್ಧಿಗೆ ಶ್ರಮ ವಹಿಸಲಾಗುವುದು: ರಾಮಗೌಡ

ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್ ರವರ ನೇತೃತ್ವದಲ್ಲಿ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಅಧ್ಯತೆ ಮೇರೆಗೆ ಅಭಿವೃದ್ಧಿ ಪಡಿಸಲು ಶ್ರಮವಹಿಸಲಾಗುವುದು ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚುಂಚನಕುಪ್ಪೆ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಮಗೌಡ ರವರು ಅಭಿಪ್ರಾಯ ವ್ಯಕ್ತಪಡಿಸಿದರು.

ನಂತರ ಪತ್ರಿಕೆ ಯೊಂದಿಗೆ ಮಾತನಾಡಿದ ಅವರು ಎಸ್ ಟಿ ಸೋಮಶೇಖರ್ ರವರ ಅದೇಶ ಮತ್ತು ನೇತೃತ್ವದಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳು ಮತ್ತು ಬಡಾವಣೆಗಳು ಸಂಪೂರ್ಣ ಅಭಿವೃದ್ಧಿ ಹೊಂದುತ್ತಿದೆ. ಅದರಂತೆ ಚುಂಚನಕುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಎಸ್ ಟಿ ಸೋಮಶೇಖರ್ ಅವರ ನೇತೃತ್ವದಲ್ಲಿ ಮತ್ತು ಅನುದಾನದಲ್ಲಿ ಸಂಪೂರ್ಣವಾಗಿ ಕುಡಿಯುವ ನೀರಿನ ಸರಬರಾಜು ಒಳಚರಂಡಿ ವ್ಯವಸ್ಥೆ ಬೀದಿದೀಪ ರಸ್ತೆಗೆ ಡಾಂಬರೀಕರಣ ಸ್ಮಶಾನ ರೈತರಿಗೆ ಅನುಕೂಲ ಕಲ್ಪಿಸುವ ಹಾಲು ಉತ್ಪಾದಕ ಸಹಕಾರ ಸಂಘಗಳ ಕಟ್ಟಡ ಇನ್ನಿತರ ನಾಗರೀಕ ಸೌಲಭ್ಯಗಳನ್ನು ಒದಗಿಸುವ ಹಲವಾರು ಯೋಜನೆಯನ್ನು ಹಮ್ಮಿಕೊಂಡು ಮುಂಬರುವ ದಿನಗಳಲ್ಲಿ ಯಾವುದೇ ಕಾಮಗಾರಿಯ ಬಾಕಿ ಇಲ್ಲದಂತೆ ಮಾಡಲು ಶ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಟಿ ಸೋಮಶೇಖರ್ ಭಾಗವಹಿಸಿ ಆಶೀರ್ವದಿಸಿದರು ಹಾಗು ರಾಜ್ಯ ಒಕ್ಕಲಿಗರ ಸಂಘದ ಅದ್ಯಕ್ಷ ಡಿ ಹನುಮಂತಯ್ಯ ರಾಮೋಹಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷ ವೇಣುಗೋಪಾಲ್ ರಾಮೋಹಳ್ಳಿ ಚೇತನ್ ರೇವಣ್ಣಸಿದ್ದಯ್ಯ ಹಾಗು ಚುಂಚನಕುಪ್ಪೆ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರು ಮತ್ತು ಮುಖಂಡರು ಭಾಗವಹಿಸಿ ಶುಭ ಕೋರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು