LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ "ರಮೇಶ್ ಸುರೇಶ್"

ಆರ್ ಕೆ ಟಾಕೀಸ್ ಲಾಂಛನದಲ್ಲಿ ಪಿ.ಕೃಷ್ಣ ಹಾಗೂ ಬಿ.ಶಂಕರ್ ಅವರು ನಿರ್ಮಾಣ ಮಾಡಿರುವ, ನಾಗರಾಜ್ ಮಲ್ಲಿಗೇನಹಳ್ಳಿ ಹಾಗೂ ರಘುರಾಜ್ ಗೌಡ ನಿರ್ದೇಶನದ ಹಾಗೂ ಗುಬ್ಬಿ ವೀರಣ್ಣ ಅವರ ಮರಿಮಗ ಬೆನಕ ಹಾಗೂ ಯಶು ರಾಜ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ " ರಮೇಶ್ ಸುರೇಶ್" ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ನಟರಾದ ಸಂತೋಷ್ ಆರ್ಯನ್, ನಾಗೇಂದ್ರ ಅರಸ್, ವಿಜಯ್ ಚೆಂಡೂರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಇಬ್ಬರು ನಿರ್ಮಾಪಕರು, ಇಬ್ಬರು ನಿರ್ದೇಶಕರು ಹಾಗೂ ಇಬ್ಬರು ನಾಯಕರಿರುವುದು ಈ ಚಿತ್ರದ ವಿಶೇಷ.ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಸಲುವಾಗಿ ಆರ್ ಕೆ ಟಾಕೀಸ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದೇವೆ. ಮೊದಲ ಹೆಜ್ಜೆಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನಿರ್ದೇಶಕರಾದ ನಾಗರಾಜ್ ಹಾಗೂ ರಘುರಾಜ್ ಅವರ ನಿರ್ದೇಶನದಲ್ಲಿ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಟ್ರೇಲರ್, ಟೀಸರ್ ಹಾಗೂ ಹಾಡುಗಳು ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಚಿತ್ರ ಜೂನ್ 21 ರಂದು ತೆರೆಗೆ ಬರಲಿದೆ ಎಂದು ನಿರ್ಮಾಪಕರಾದ ಕೃಷ್ಣ ಹಾಗೂ ಶಂಕರ್ ಅವರು ತಿಳಿಸಿದರು.

ನಮಗೆ ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇವೆ ಎಂದು ಮಾತನಾಡಿದ ನಿರ್ದೇಶಕರಾದ ನಾಗರಾಜ್ ಮಲ್ಲಿಗೇನಹಳ್ಳಿ ಹಾಗೂ ರಘುರಾಜ್ ಗೌಡ, ಇದೊಂದು ಕಾಮಿಡಿ ಜಾನರ್ ನ ಚಿತ್ರವಾದರೂ ಒಳ್ಳೆಯ ಸಂದೇಶವುಳ್ಳ ಚಿತ್ರ. ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಎಲ್ಲರೂ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದರು.

ನಮ್ಮ ಚಿತ್ರದಲ್ಲಿ ಡಬ್ಬಲ್ ಮೀನಿಂಗ್ ಸಂಭಾಷಣೆಯಾಗಲಿ, ಅನವಶ್ಯಕ ಸನ್ನಿವೇಶಗಳಾಗಲಿ ಯಾವುದೂ ಇಲ್ಲ. ಜನರಿಗೆ ಬೇಸರವಾಗದಂತೆ ಉತ್ತಮ ಮನೋರಂಜನೆಯ ನೀಡುವ ಚಿತ್ರವಿದು. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು "ರಮೇಶ್ ಸುರೇಶ್" ಪಾತ್ರಧಾರಿಗಳಾದ ಬೆನಕ ಗುಬ್ಬಿ ವೀರಣ್ಣ ಹಾಗೂ ಯಶು ರಾಜ್.ಚಿತ್ರದಲ್ಲಿ ನಟಿಸಿರುವ ಬಹುಭಾಷ ನಟ ಸತ್ಯಪ್ರಕಾಶ್, ನೀನಾಸಂ ರಂಗನಾಥ್, ಉಮಾ ಮುಂತಾದವರು ಈ ಚಿತ್ರದ ಕುರಿತು ಮಾತನಾಡಿದರು. ಚಂದನ ಸೇಗು ಈ ಚಿತ್ರದ ನಾಯಕಿ. ಸಾಧುಕೋಕಿಲ ಅವರು "ರಮೇಶ್ ಸುರೇಶ್" ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು