LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ NIA ಕಾರ್ಯಾಚರಣೆ ಬೆಂಗಳೂರು, ಕೊಯಮತ್ತೂರಿನಲ್ಲಿ ಹಲವು ಮಹತ್ವದ ದಾಖಲೆಗಳು ವಶ

ಬೆಂಗಳೂರು: ಕಳೆದ ಮಾರ್ಚ್ 1ರಂದು ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ದಳದವರು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.ಬೆಂಗಳೂರು ಹಾಗೂ ತಮಿಳುನಾಡಿದ ಕೊಯಮತ್ತೂರಿನಲ್ಲಿ ದಾಳಿ ನಡೆಸಿರುವ ಎನ್‍ಐಎ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು 4 Uಕಡೆ ಸೇರಿದಂತೆ ಕೊಯಮತ್ತೂರು ಸೇರಿ ಒಟ್ಟು11 ಕಡೆ ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಉಗ್ರರ ಜೊತೆ ಹಲವರು ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮೂಲಗಳ ಪ್ರಕಾರ ಎನ್‍ಐಎ ಅಧಿಕಾರಿಗಳು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮತ್ತು ಬನಶಂಕರಿಯಲ್ಲಿ ದಾಳಿ ಮಾಡಿದ್ದಾರೆ.

ಎನ್‍ಐಎ ಕೊಯಮತ್ತೂರಿನ ವೈದ್ಯರಾದ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಿದೆ.ಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ವೈಟ್‍ಫೀಲ್ಡ್‍ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು. ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ ಅನ್ನು ಎನ್‍ಐಎ ಅಧಿಕಾರಿಗಳು, ಘಟನೆ ನಡೆದು 43 ದಿನಗಳ ಬಳಿಕ, ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು. ಬಂಧಿತರ ವಿಚಾರಣೆ ನಡೆಸಿದ್ದು ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದ್ದವು.

ಎನ್‍ಐಎ ವಿಚಾರಣೆ ವೇಳೆ ಬಾಂಬರ್ ಮುಸಾವೀರ್ ಹಾಗೂ ಮತೀನ್ ತಾಹ ಆಘಾತಕಾರಿ ಸತ್ಯ ಹೊರಹಾಕಿದ್ದರು. ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಮುನ್ನವೇ, ವೈಟ್‍ಫೀಲ್ಡ್ ಭಾಗದ ವಿಶೇಷ ಆರ್ಥಿಕ ವಲಯಗಳನ್ನು ಉಗ್ರರು ಟಾರ್ಗೆಟ್ ಮಾಡಿದ್ದಾಗಿ ತಿಳಿಸಿದ್ದರು.ಐಟಿಬಿಪಿ ಕಂಪನಿಗಳು ಹೆಚ್ಚಿರುವ ಈ ಬಾಗದಲ್ಲಿ ಬ್ಲಾಸ್ಟ್ ಮಾಡಿದರೆ, ಜಾಗತಿಕ ಮಟ್ಟದಲ್ಲಿ ಸದ್ದು ಮಾಡಬಹುದು. ಐಸಿಸ್ ಸಂಘಟನೆ ನಮ್ಮನ್ನ ಸಲೀಸಾಗಿ ಸೇರಿಸಿಕೊಳ್ಳುತ್ತೆ ಅನ್ನೋ ನಂಬಿಕೆ ಇತ್ತಂತೆ. ಆದರೆ ಐಟಿಬಿಟಿ ಏರಿಯಾದಲ್ಲಿ, ಸೆಕ್ಯೂರಿಟಿ ಬಿಗಿಯಾಗಿದ್ದರಿಂದ ಸ್ಫೋಟದ ಸಂಚು ವರ್ಕೌಟ್ ಆಗಲಿಲ್ಲ. ಹೀಗಾಗಿ, ಇದು ಸೇಫ್ ಅಲ್ಲ ಅಂತ ಮುಂದೆ ಸಾಗಿದವರ ಕಣ್ಣಿಗೆ ಬಿದ್ದದ್ದೇ ಈ ರಾಮೇಶ್ವರಂ ಕೆಫೆ.

ರಾಮೇಶ್ವರಂ ಕೆಫೆ ಕಂಡ ಉಗ್ರರಿಗೆ ಕೋಪ ಹೆಚ್ಚಾಗಿತ್ತು. ಕಾರಣ, ಕೆಫೆ ಮುಂದಿದ್ದ ಹೂವಿನ ಅಲಂಕಾರ, ಕೇಸರಿ ಮಯವಾಗಿದ್ದ ಕಲರ್ ಪೇಪರ್ಸ್. ದೇಶಾದ್ಯಂತ ರಾಮಮಂದಿರ ಉದ್ಘಾಟನೆ ಸಂಭ್ರಮ ಇದಿದ್ರಿಂದ ಎಲ್ಲೆಲ್ಲೂ ರಾಮಜಪ ಜೋರಾಗಿತ್ತು. ಹೀಗಾಗಿ, ರಾಮೇಶ್ವರಂ ಕೆಫೆ ಸ್ಫೋಟಿಸೋದೇ ಸೂಕ್ತ ಅಂತ ನಿರ್ಧರಿಸಿದ್ರಂತೆ. ಅದರಂತೆ ಮಾರ್ಚ್ 1 ರಂದು ಬಾಂಬ್ ಇಟ್ಟು ಎಸ್ಕೇಪ್ ಆಗಿದ್ದಾಗಿ ಎನ್‍ಐಎ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು