LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ರಣಾಕ್ಷ" ಆಡಿಯೋ, ಟೀಸರ್ ಬಿಡುಗಡೆ

ಯುವ ಪ್ರತಿಭೆಗಗಳ ತಂಡವೇ ಸೇರಿ ಮಾಡಿರುವ ಸಸ್ಪೆನ್ಸ್ , ಥ್ರಿಲ್ಲರ್ ಚಿತ್ರ "ರಣಾಕ್ಷ". ಈ ಚಿತ್ರದ ಹಾಡುಗಳು ಹಾಗೂ ಟೀಸರ್ ನ್ನು ಸಾಹಿತಿ, ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಬಿಡುಗಡೆ ಮಾಡಿದರು. ನಂತರ ಮಾತನಾಡುತ್ತಾ ನಿರ್ದೇಶಕ ರಾಘವ ನನಗೆ ಬಹಳ ವರ್ಷದ ಗೆಳೆಯರು , ನಾನು ಈ ಚಿತ್ರದ ಬಗ್ಗೆ ಯಾವುದೇ ನಿರೀಕ್ಷೆ ಇಟ್ಕೊಂಡು ಇಲ್ಲಿಗೆ ಬಂದಿರಲಿಲ್ಲ ,

ಆದರೆ ಟೀಸರ್ ಹಾಗೂ ಹಾಡುಗಳನ್ನು ನೋಡಿದ ಮೇಲೆ ತಂಡದ ಶ್ರಮ ಕಾಣುತ್ತದೆ. ಈ ರಣಾಕ್ಷ ಟೈಟಲ್ಲೇ ಸ್ಟ್ರಾಂಗ್ ಇದೆ. ಮೊದಲೆಲ್ಲಾ ಸಿನಿಮಾಗಳು ಹೆಚ್ಚು ಇರಲಿಲ್ಲ , ಹಾಡುಗಳು ಕೂಡ ಕಮ್ಮಿ ಇತ್ತು , ಪದೇ ಪದೇ ಅದೇ ಹಾಡನ್ನು ಆಕಾಶವಾಣಿ ಹಾಗೂ ಸಮಾರಂಭಗಳಲ್ಲಿ ಕೇಳಿದಾಗ ಸದಾ ನೆನಪಿಗೆ ಬರುತ್ತಿತ್ತು , ಈಗ ವರ್ಷಕ್ಕೆ ಸುಮಾರು 300 ಚಿತ್ರಗಳು ಬರುತ್ತಿವೆ.

ಇನ್ನು ಎಷ್ಟು ಹಾಡುಗಳು ಬಂದಿರಬೇಕು ಯೋಚಿಸಿ. ಅದರಲ್ಲೂ ಈ ಚಿತ್ರದ ಹಾಡುಗಳು ನೋಡಿದಾಗ ಬಹಳ ಖುಷಿ ಎನಿಸಿತು , ಯಾಕೆಂದರೆ ನೋಡಿದ ಮೂರು ಹಾಡುಗಳು ಹೊಸತನದ ಸದ್ದನ್ನ ಮೂಡಿಸುತ್ತದೆ. ಸಂಗೀತ ನಿರ್ದೇಶಕ ವಿಶಾಲ್ ಅಲಾಪ್ ಕೆಲಸ ಸೊಗಸಾಗಿದೆ. ಅದೇ ರೀತಿ ಗಾಯಕರಿಗೂ ಕೂಡ ಉತ್ತಮ ಭವಿಷ್ಯವಿದೆ.

ಪೂರ್ಣ ಪ್ರಮಾಣದ ನಾಯಕನಾಗಿ ಬೆಳ್ಳಿ ಪರದೆಗೆ ಬರುತ್ತಿರುವ ರಘು, ನಾಯಕಿಯರಾದ ರಕ್ಷಾ ಹಾಗೂ ರೋಹಿ ಸೇರಿದಂತೆ ಇಡೀ ಚಿತ್ರತಂಡಕ್ಕೆ ಯಶಸ್ಸು ಸಿಗಲಿ ಎಂದು ಶುಭ ಕೋರಿದರು. ಇನ್ನು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಮೋಹನ್ ರಾವ್ ನಾಲ್ವಡೆ, ರಮೇಶ್ ಗೌಡ , ಗಿರೀಶ್ ಗೌಡ, ಲಕ್ಷ್ಮಣ್ ಪಡಿಮನಿ ಸೇರಿದಂತೆ ಎಲ್ಲರೂ ಚಿತ್ರತಂಡದಕ್ಕೆ ಶುಭ ಹಾರೈಸಿದರು.
ಚಿತ್ರದ ನಿರ್ದೇಶಕ ರಾಘವ ಮಾತನಾಡುತ್ತಾ "ರಣಾಕ್ಷ" ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ, ಇದೊಂದು ಸಸ್ಪೆನ್ಸ್ , ಥ್ರಿಲ್ಲರ್ ಕಥೆ ಒಳಗೊಂಡ ಚಿತ್ರ , ಯಾವುದೇ ಮಂತ್ರ , ತಂತ್ರ , ಶಕ್ತಿ ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು ಅದು ಹೇಗೆ.. ಏನು.. ಎಂಬುದನ್ನು ಚಿತ್ರದಲ್ಲಿ ನೋಡಬೇಕು, ಬಹಳ ಶ್ರಮವಹಿಸಿ ಒಂದು ವಿಭಿನ್ನ ಚಿತ್ರವನ್ನು ನಿಮ್ಮ ಮುಂದೆ ತರುತ್ತಿದ್ದೇವೆ.

ನಿಮ್ಮೆಲ್ಲರ ಪ್ರೋತ್ಸಾಹ , ಸಹಕಾರ ನಿರಂತರವಾಗಿ ಇರಲಿ ಎಂದು ಕೇಳಿಕೊಂಡರು. ನಿರ್ಮಾಪಕ ರಾಮು ಮಾತನಾಡುತ್ತಾ ನನಗೂ ಸಿನಿಮಾ ಮಾಡಬೇಕೆಂಬ ಆಸೆ ಇತ್ತು. ಯಾಕೆಂದರೆ ಒಂದು ಚಿತ್ರ ಮಾಡಿದರೆ ನಮಗೊಂದು ಹೆಸರು ಬರುತ್ತೆ ಅಂತ, ಈ ಚಿತ್ರವನ್ನು ನೋಡಿ ನೀವೆಲ್ಲ ಗೆಲ್ಲಿಸಿದರೆ, ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆ ಇದೆ ಎಂದರು.

ಕಾಮಿಡಿ ಕಿಲಾಡಿ ಮೂಲಕ ಜನರ ಗಮನವನ್ನು ಸೆಳೆದ ಪ್ರತಿಭೆ ನಾಯಕ ಸೀರುಂಡೆ ರಘು ಮಾತನಾಡುತ್ತಾ ನಾನು ಕೂಡ ಮಾಧ್ಯಮದಲ್ಲಿ ಕ್ಯಾಮೆರಾ ಟ್ರೈಪಾಡ್ ಹಿಡಿದುಕೊಂಡು ಬಂದವನು , ನಂತರ ಕಾಮಿಡಿ ಕಿಲಾಡಿಯಲ್ಲಿ ಕಾಣಿಸಿಕೊಂಡೆ , ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಹೀರೋ ಅನ್ನುವುದಕ್ಕಿಂತ ಕಥಾ ನಾಯಕನ ಪಾತ್ರದಲ್ಲಿ ಅಭಿನಯಿಸಿ ದ್ದೇನೆ. ಮೊದಲ ಬಾರಿಗೆ ಲೀಡ್ ರೋಲ್ ಮಾಡ್ತಿರುವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು