LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಾಟಕಮನೆ ಕಲಾವಿದರಿಗೆ ರಂಗಗೌರವ, `ಭಾಸ ಭಾರತ' ರಂಗ ಪ್ರಯೋಗ

ಪ್ರಯೋಗದಾಟಗಳ ರಂಗ ಕೇಂದ್ರವೆಂದೇ ಪ್ರಸಿದ್ಧಿ ಇರುವ ನಾಟಕಮನೆ ತುಮಕೂರು ರಂಗ ತಂಡವು ನಿರಂತರವಾಗಿ ರಂಗ ಉತ್ಸವ, ನಾಟಕಗಳು, ವಿಚಾರ ಸಂಕಿರಣಗಳು, ರಂಗ ಕಾರ್ಯಾಗಾರಗಳು, ಸಾಧಕರಿಗೆ ಅಭಿನಂದನೆ ಹೀಗೆ ಹಲವಾರು ರೀತಿಯ ರಂಗ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ.

ಇದೀಗ ದಿನಾಂಕ 17-05-2024ರ ಶುಕ್ರವಾರ ಸಂಜೆ 6ಕ್ಕೆ ತುಮಕೂರು ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ, ಕನ್ನಡ ರಂಗಭೂಮಿಯಲ್ಲಿ ನಟನೆ, ನಿರ್ದೇಶನ, ಸಂಘಟನೆ ಹೀಗೆ ವಿವಿಧ ಪ್ರಕಾರಗಳಲ್ಲಿ ಜನಮನ್ನಣೆ ಗಳಿಸಿರುವ ಕಲಾವಿದರಿಗೆ ರಂಗಗೌರವವನ್ನು ನೀಡಿ ಅಭಿನಂದಿಸಲಾಗುತ್ತದೆ.

ನಂತರ ಮಹಾಕವಿ ಭಾಸನ ಮಧ್ಯಮ ವ್ಯಾಯೋಗ, ಧೂತ ಘಟೋತ್ಕಚ, ಕರ್ಣಭಾರ ಮತ್ತು ಊರುಭಂಗ ನಾಟಕಗಳನ್ನು ಸಂಯೋಗಿಸಿಕೊಂಡ "ಭಾಸ ಭಾರತ" ಎಂಬ ರಂಗಪ್ರಯೋಗವು ಶಿವು ಹೊನ್ನಿಗನಹಳ್ಳಿರವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಉಚಿತ ಪ್ರವೇಶವಿರುವ ಈ ಕಾರ್ಯಕ್ರಮಕ್ಕೆ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ರಂಗಸಂಘಟಕ ನಾಟಕಮನೆ ಮಹಾಲಿಂಗು ಮನವಿ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು