LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರಣಜಿ ಕ್ರಿಕೆಟ್: ಇಂದಿನಿಂದ ಕರ್ನಾಟಕ-ಗೋವಾ ಪಂದ್ಯ

ಮೈಸೂರು: ಕರ್ನಾಟಕ ತಂಡವು ಶುಕ್ರವಾರದಿಂದ ಆರಂಭವಾಗುವ ರಣಜಿ ಟ್ರೋಫಿ ಕ್ರಿಕೆಟ್ ಕೂಟದ `ಸಿ’ ಬಣದ ಮೂರನೇ ಸುತ್ತಿನ ಪಂದ್ಯದಲ್ಲಿ ಗೋವಾ ತಂಡವನ್ನು ಎದುರಿಸಲಿದೆ. ಆರಂಭದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಅಮೋಘ ಗೆಲುವ ಸಾಧಿಸಿದ್ದ ಕರ್ನಾಟಕ ತಂಡವು ಅಹ್ಮದಾಬಾದ್‍ದಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಗುಜರಾತ್ ವಿರುದ್ಧ ಹೀನಾಯವಾಗಿ ಆಡಿ ಸೋಲನ್ನು ಕಂಡಿತ್ತು.

ಗೆಲ್ಲಲು ಕೇವಲ 110 ರನ್ ಗಳಿಸುವ ಗುರಿ ಪಡೆದಿದ್ದ ಕರ್ನಾಟಕ ತಂಡ ಒಂದು ಹಂತದಲ್ಲಿ ವಿಕೆಟ್ ನಷ್ಟವಿಲ್ಲದೇ 50 ರನ್ ಗಳಿಸಿದ್ದರೂ ಆಬಳಿಕ ನಾಟಕೀಯವಾಗಿ ಬ್ಯಾಟಿಂಗ್ ಕುಸಿತ ಕಂಡು 103 ರನ್ನಿಗೆ ಆಲೌಟಾಗಿ ಸೋಲನ್ನು ಕಂಡಿತ್ತು. ಗೋವಾ ಸಾಧಾರಣ ತಂಡವಾಗಿರುವ ಕಾರಣ ಕರ್ನಾಟಕ ಈ ಪಂದ್ಯದಲ್ಲಿ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸಬೇಕಾಗಿದೆ. ಈ ಪಂದ್ಯ ಮೈಸೂರಿನಲ್ಲಿ ನಡೆಯುವ ಕಾರಣ ಕರ್ನಾಟಕಕ್ಕೆ ಗೆಲುವಿನ ಆವಕಾಶ ಹೆಚ್ಚಿದೆ.

ಮುಂಬಯಿಗೆ ಕೇರಳ ಸವಾಲು: ‘ಬಿ’ ಬಣದಲ್ಲಿರುವ ಮುಂಬಯಿ ತಂಡವು ತಿರುವನಂತಪುರದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೇರಳ ತಂಡದ ಸವಾಲನ್ನು ಎದುರಿಸಲಿದೆ. ಮುಂಬಯಿ ಈ ಹಿಂದಿನ ಎರಡು ಪಂದ್ಯಗಳಲ್ಲಿ ಬಿಹಾರ ಮತ್ತು ಆಂಧ್ರ ತಂಡವನ್ನು ಸೋಲಿಸಿದ ಸಾಧನೆ ಮಾಡಿದೆ. ಬಿಹಾರ ವಿರುದ್ದ ಇನ್ನಿಂಗ್ಸ್ ಗೆಲುವು ಸಾಧಿಸಿದ್ದ ಮುಂಬಯಿ ತಂಡವು ಆಂಧ್ರ ವಿರುದ್ಧ 10 ವಿಕೆಟ್‍ಗಳ ಜಯ ಸಾಧಿಸಿತ್ತು. ಇದೇ ವೇಳೆ ಕೇರಳ ತಂಡವು ಉತ್ತರ ಪ್ರದೇಶ ಮತ್ತು ಅಸ್ಸಾಂ ವಿರುದ್ಧ ಆಡಿದ್ದು ಈ ಎರಡೂ ತಂಡಗಳು ಡ್ರಾ ಆಗಿದ್ದವು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು