LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ದರ ಏರಿಕೆ ಚರ್ಚೆ

ಇಂದಿನ ಸಂಪುಟ ಸಭೆಯಲ್ಲಿ ಹಾಲಿನ ದರ, ಬಸ್ ಟಿಕೆಟ್ ದರ ಏರಿಕೆ ಸೇರಿದಂತೆ ಹಲವು ನಿರ್ಧಾರ ಸಾಧ್ಯತೆ!


ಬೆಂಗಳೂರು: ವಿಧಾನಸೌಧದಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವರ ಮಹತ್ವದ ಸಂಪುಟ ಸಭೆಯಲ್ಲಿ ಸಾರ್ವಜನಿಕರ ಮೇಲೆ ನೇರ ಪರಿಣಾಮ ಬೀರಲಿರುವ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ಮತ್ತು ತೀರ್ಮಾನಗಳು ಹೊರಬೀಳುವ ಸಾಧ್ಯತೆಯಿದೆ. ಮುಖ್ಯವಾಗಿ ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪಗಳು ಸಂಪುಟದ ಅಂಗಳ ತಲುಪಲಿವೆ. ಪ್ರತಿ ಲೀಟರ್ ಹಾಲಿನ ದರವನ್ನು 8 ರಿಂದ 10 ರೂಪಾಯಿಗಳವರೆಗೆ ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸಲ್ಲಿಸಿರುವ ಪ್ರಸ್ತಾಪದ ಕುರಿತು ಈ ಹಿಂದೆ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಈ ಬೆಲೆ ಏರಿಕೆ ನಿರ್ಧಾರಕ್ಕೆ ಇಂದಿನ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗುವ ನಿರೀಕ್ಷೆಯಿದೆ.ಇದರೊಂದಿಗೆ ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ಆರ್ಥಿಕ ಹೊರೆಯನ್ನು ಸರಿದೂಗಿಸಲು ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಈ ಕುರಿತು ವಿಸ್ತöÈತ ಸಮಾಲೋಚನೆ ನಡೆಯಲಿದೆ. ಹಾಗೆಯೇ ವಾಯುವ್ಯ ಸಾರಿಗೆ ಸಂಸ್ಥೆಗೆ `ಕಿತ್ತೂರು ರಾಣಿ ಚೆನ್ನಮ್ಮ' ಎಂದು ಮರುನಾಮಕರಣ ಮಾಡುವ ಪ್ರಸ್ತಾಪಕ್ಕೆ ಸಂಪುಟ ಅನುಮೋದನೆ ನೀಡುವ ಸಾಧ್ಯತೆಯಿದೆ. ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ಮಹತ್ವದ ವಿಧೇಯಕ ಹಾಗೂ ರಾಜ್ಯದ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ನಿಯೋಗ ಕೊಂಡೊಯ್ಯುವ ಕುರಿತಂತೆಯೂ ಇಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.ಇದಲ್ಲದೆ, ಕಾನೂನಾತ್ಮಕ ಪ್ರಕ್ರಿಯೆಗಳ ಭಾಗವಾಗಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ. ಸಾರ್ವಜನಿಕ ಹಿತದೃಷ್ಟಿ ಹಾಗೂ ರಾಜ್ಯದ ಅಭಿವೃದ್ಧಿ ಯೋಜನೆಯ ಹಲವು ಪ್ರಮುಖ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಇಂದಿನ ಸಂಪುಟ ಸಭೆಯ ತೀರ್ಮಾನಗಳು ತೀವ್ರ ಕುತೂಹಲ ಮೂಡಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST