ಬೆಂಗಳೂರು: ಬೆಳಗಾವಿ ಪೊಲೀಸರು ಜಾರಿಗೊಳಿಸಿದ್ದ ಲುಕ್‌ಔಟ್ ನೋಟಿಸ್ ಹಿನ್ನೆಲೆಯಲ್ಲಿ ಬಸವ ಮಂಟಪ ಕೃತಿಯ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.ಲೇಖಕ ರವಿ ಹಂಜ್ ಅವರ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ಸಂಬAಧಿಸಿದAತೆ ಮಾರ್ಕೆಟ್ ಠಾಣೆಯ ಪೊಲೀಸರು ಈ ಹಿಂದೆ ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಅವರನ್ನು ತಡೆದು ವಶಕ್ಕೆ ಪಡೆದಿರುವ ಏರ್‌ಪೋರ್ಟ್ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ, ತಕ್ಷಣವೇ ಬೆಳಗಾವಿ ಮಾರ್ಕೆಟ್ಪೊ ಲೀಸ್ ಠಾಣೆಗೆ ಈ ಕುರಿತು ಮಾಹಿತಿ ರವಾನಿಸಿದ್ದಾರೆ. ಸದ್ಯ ಬೆಳಗಾವಿ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆ ಹಾಗೂ ರವಿ ಹಂಜ್ ಅವರನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.