LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಮ್ಮ ಊರು, ನಮ್ಮ ನೂರು: ಬೆಂಗಳೂರಿನಲ್ಲಿ ಆರ್. ಸಿ.ಬಿ ಶತಕ

ಐಪಿಎಲ್‌ನ 26ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಕೇವಲ ಒಂದು ಪಂದ್ಯವಲ್ಲ, ಅದೊಂದು ಭಾವನಾತ್ಮಕ ಮೈಲಿಗಲ್ಲು. ಐಪಿಎಲ್ ಇತಿಹಾಸದಲ್ಲೇ ಅತ್ಯಂತ ನಿಷ್ಠಾವಂತ ಅಭಿಮಾನಿಗಳನ್ನು ಹೊಂದಿರುವ ಈ ತಂಡ, ಇಂದು (ಏಪ್ರಿಲ್ 18, 2026) ತನ್ನ ತವರು ಮೈದಾನವಾದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 100ನೇ ಐಪಿಎಲ್ ಪಂದ್ಯವನ್ನಾಡುತ್ತಿದೆ.ಡಬಲ್ ವಿಶೇಷ: ವಿಶೇಷವೆಂದರೆ, 18 ವರ್ಷಗಳ ಹಿಂದೆ ಅಂದರೆ 2008ರ ಏಪ್ರಿಲ್ 18ರಂದೇ ಆರ್‌ಸಿಬಿ ತಂಡವು ಐಪಿಎಲ್‌ನ ಮೊಟ್ಟಮೊದಲ ಪಂದ್ಯವಾಡಿತ್ತು. ಅಂದರೆ ಚೊಚ್ಚಲ ಐಪಿಎಲ್‌ನ ಮೊದಲ ಪಂದ್ಯ ನಡೆದಿದ್ದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಅಂದು ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಿದ್ದವು.ಇದೀಗ ಬರೋಬ್ಬರಿ 19 ವರ್ಷಗಳ ಬಳಿಕ ಆರ್‌ಸಿಬಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 100ನೇ ಪಂದ್ಯವಾಡುತ್ತಿದೆ. ಅದು ಸಹ ಏಪ್ರಿಲ್ 18 ರಂದೇ ಎಂಬುದೇ ವಿಶೇಷ. ಅಂದರೆ ಐಪಿಎಲ್‌ನ ಮೊದಲ ಪಂದ್ಯವಾಡಿದ ದಿನಾಂಕದAದೇ ಆರ್‌ಸಿಬಿ 100ನೇ ಪಂದ್ಯವಾಡುತ್ತಿದೆ.ಐತಿಹಾಸಿಕ ಮೈಲುಗಲ್ಲು: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಯಾವುದೇ ತಂಡ ಒಂದೇ ಮೈದಾನದಲ್ಲಿ 100 ಪಂದ್ಯಗಳನ್ನಾಡಿಲ್ಲ ಎಂಬುದು ವಿಶೇಷ.ಮುಂಬೈ ಇಂಡಿಯನ್ಸ್: ಮುಂಬೈನ ವಾಂಖೆಡೆ ಕ್ರೀಡಾಂಗಣವು ಅತಿ ಹೆಚ್ಚು ಐಪಿಎಲ್ ಪಂದ್ಯಗಳಿಗೆ (ಸುಮಾರು 126) ಆತಿಥ್ಯ ನೀಡಿದ್ದರೂ, ಮುಂಬೈ ತಂಡವು ಅಲ್ಲಿ ಆಡಿರುವುದು 92 ಮ್ಯಾಚ್ ಗಳನ್ನು ಮಾತ್ರ.ಚೆನ್ನೈ ಸೂಪರ್ ಕಿಂಗ್ಸ್: ಎಂ.ಎ. ಚಿದಂಬರಂ (ಚೆಪಾಕ್) ಕ್ರೀಡಾಂಗಣದಲ್ಲಿ ಸಿಎಸ್‌ಕೆ ಇದುವರೆಗೆ ಸುಮಾರು 92 ಪಂದ್ಯಗಳನ್ನು ಆಡಿದೆ.ಚಿನ್ನಸ್ವಾಮಿಯಲ್ಲಿಃ ದಾಖಲೆ ಹೇಗಿದೆ?ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ 99 ಪಂದ್ಯಗಳನ್ನಾಡಿದೆ. ಈ ವೇಳೆ ಆರ್‌ಸಿಬಿ 48 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 46 ಪಂದ್ಯಗಳಲ್ಲಿ ಸೋಲು ಕಂಡಿದೆ. ಇನ್ನುಳಿದ 5 ಮ್ಯಾಚ್‌ಗಳು ಕಾರಣಾಂತರಗಳಿಂದ ರದ್ದಾಗಿದ್ದವು.2026ರ ಐಪಿಎಲ್ ಸೀಸನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಒಟ್ಟು 5 ಪಂದ್ಯಗಳನ್ನು ಆಡಿದೆ. ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ 3 ಪಂದ್ಯಗಳಲ್ಲೂ ಆರ್‌ಸಿಬಿ ಗೆಲುವು ದಾಖಲಿಸಿದೆ. ಹೀಗಾಗಿ ಇಂದಿನ ಮ್ಯಾಚ್‌ನಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ. ಅದರಂತೆ ನೂರನೇ ಪಂದ್ಯದಲ್ಲಿ ಆರ್‌ಸಿಬಿ ಸ್ಮರಣೀಯ ಗೆಲುವು ತನ್ನದಾಗಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು