LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪ್ಲೇ ಆಫ್‍ಗೆ ಎಂಟ್ರಿಕೊಟ್ಟ ಆರ್‍ಸಿಬಿ

ದೆಹಲಿ: ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್‍ನ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‍ಸಿಬಿ) ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್‍ಸಿಬಿ ತಂಡವು ಪ್ಲೇಆಫ್‍ಗೆ ಪ್ರವೇಶಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು ಎಲ್ಲಿಸ್ ಪೆರ್ರಿ ಅವರ ಮಾರಕ ದಾಳಿಗೆ ತತ್ತರಿಸಿತು. ಲಯ ಬದ್ಧ ಬೌಲಿಂಗ್ ದಾಳಿ ಸಂಘಟಿಸಿದ ಪೆರ್ರಿ ಕೇವಲ 4 ಓವರ್‍ಗಳಲ್ಲಿ ಕೇವಲ 15 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ 19 ಓವರ್‍ಗಳಲ್ಲಿ 113 ರನ್‍ಗಳಿಸಿ ಮುಂಬೈ ಇಂಡಿಯನ್ಸ್ ಆಲೌಟ್ ಆಯಿತು.

114 ರನ್‍ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್‍ಸಿಬಿ 7 ವಿಕೆಟ್‍ಗಳ ಜಯ ಸಾಧಿಸಿ ಪ್ಲೇಆಫ್‍ಗೆ ಅರ್ಹತೆ ಪಡೆದುಕೊಂಡಿದೆ. ಲೀಗ್ ಹಂತದಲ್ಲಿ ಆಡಿರುವ 4 ಜಯ ಸಾಧಿಸಿದ್ದು, ಶುಕ್ರವಾರ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST