LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಅಗ್ರಸ್ಥಾನದ ಮೇಲೆ ಆರ್‌ಸಿಬಿ ಚಿತ್ತ

ಅಮೋಘ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 42ನೇ ಪಂದ್ಯದಲ್ಲಿ ಏಪ್ರಿಲ್ 30ರ ಗುರುವಾರ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಸದ್ಯ ಆಡಿರುವ 8 ಪಂದ್ಯಗಳ ಪೈಕಿ 6 ಗೆಲುವು ಮತ್ತು 2ರಲ್ಲಿಸೋಲು ಕಂಡಿರುವ ಕಳೆದ ಬಾರಿಯ ಚಾಂಪಿಯನ್ ಆರ್‌ಸಿಬಿ, ಪ್ರಸ್ತುತ 12 ಅಂಕಗಳನ್ನು ಹೊಂದಿದ್ದು ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಗುರಿ ಹೊಂದಿದೆ.ಟೂರ್ನಿಯ ಅರ್ಧ ಭಾಗ ಮುಗಿದಿರುವ ಕಾರಣ ಎಲ್ಲತಂಡಗಳ ನಡುವೆ ಪ್ಲೇಆಫ್ ಲೆಕ್ಕಾಚಾರ ಶುರುವಾಗಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಮೇಲೇರಲು ಎಲ್ಲತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಅತ್ತ ಮಾಜಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಸಹ ಆಡಿದ 8 ಪಂದ್ಯಗಳಲ್ಲಿ ತಲಾ ನಾಲ್ಕು ಗೆಲುವು ಮತ್ತು ಸೋಲುಗಳನ್ನು ಕಂಡಿದೆ. 8 ಅಂಕಗಳನ್ನು ಹೊಂದಿರುವ ಶುಬ್ಮನ್ ಗಿಲ್ ಬಳಗ, ಸ್ಥಿರ ಪ್ರದರ್ಶನ ನೀಡಲು ಎದುರು ನೋಡುತ್ತಿದೆ.ಮುಂಬಯಿ ಇಂಡಿಯನ್ಸ್ ಮತ್ತು ಆರ್‌ಸಿಬಿ ವಿರುದ್ಧ ಪರಾಭವಗೊಂಡ ನಂತರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಗೆಲುವಿನ ಹಾದಿಗೆ ಮರಳಿರುವ ಗುಜರಾತ್, ಆರ್‌ಸಿಬಿ ಎದುರಿನ ಹಿಂದಿನ ಸೋಲಿಗೆ ಮುಯ್ಯಿ ತೀರಿಸಿಕೊಳ್ಳಲು ಎದುರು ನೋಡುತ್ತಿದೆ. ಏಪ್ರಿಲ್ 24ರಂದು ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ 205 ರನ್ ಗಳಿಸಿಯೂ ಗುಜರಾತ್ 5 ವಿಕೆಟ್‌ಗಳಿಂದ ಪರಾಭವಗೊಂಡಿತ್ತು.ಹಾಲಿ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಅಗ್ರ ಮೂರು ತಂಡಗಳಲ್ಲಿಒಂದಾಗಿರುವ ಆರ್‌ಸಿಬಿ, ಇದುವರೆಗೂ ಉತ್ತಮ ಪ್ರದರ್ಶನ ಕಾಯ್ದುಕೊಂಡಿದೆ. ಕೆಲವು ಪಂದ್ಯಗಳಲ್ಲಿ ಬ್ಯಾಟರ್‌ಗಳು ಮಿಂಚಿದರೆ, ಇನ್ನು ಕೆಲುವು ಪಂದ್ಯಗಳಲ್ಲಿಬೌಲರ್‌ಗಳು ಕಂಗೊಳಿಸಿದ್ದಾರೆ. ಅದರಲ್ಲೂಹಿಂದಿನ ಡೆಲ್ಲಿಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹೇಜಲ್‌ವುಡ್ ಜೋಡಿ ತಮ್ಮ ಬೌಲಿಂಗ್ ಪರಾಕ್ರಮ ಮೆರೆದಿದ್ದಾರೆ.ಹೇಗಿದೆ ಮೋದಿ ಕ್ರೀಡಾಂಗಣದ ಪಿಚ್?
ಉಭಯ ತಂಡಗಳು 7 ಬಾರಿ ಎದುರಾಗಿದ್ದು, ನಾಲ್ಕರಲ್ಲಿ ಆರ್‌ಸಿಬಿ ಮತ್ತು 3ರಲ್ಲಿ ಗುಜರಾತ್ ಗೆಲುವು ಸಾಧಿಸಿವೆ. ಇನ್ನು ನರೇಂದ್ರ ಮೋದಿ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಹಿಯಾಗಿದ್ದು ರನ್ ಮಳೆಯನ್ನು ನಿರೀಕ್ಷಿಸಲಾಗಿದೆ. ಸ್ಪಿನ್ನರ್ ಗಳಿಗೂ ಈ ಪಿಚ್ ನೆರವು ನೀಡಬಹುದೆಂದು ಹೇಳಲಾಗುತ್ತಿದೆ. ಏನೇ ಇದ್ದರೂ ಪಂದ್ಯದ ಎರಡನೇ ಅವಧಿಯಲ್ಲಿ ಇಬ್ಬನಿಯ ಪ್ರಭಾವ ಇರುವುದರಿಂದ ಟಾಸ್ ಗೆದ್ದವರು ಮೊದಲು ಫೀಲ್ಡಿಂಗ್ ಆಯ್ದುಕೊಳ್ಳುವ ಸಾಧ್ಯತೆಯೇ ಹೆಚ್ಚು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು