LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪೃಥ್ವಿ ಶಾರಿಂದ ದಾಖಲೆ ಶತಕ

ರಾಯ್ಪುರ: ಪ್ರತಿಭಾನ್ವಿತ ಆರಂಭಿಕ ಆಟಗಾರ ಪೃಥ್ವಿ ಶಾ ಅವರು ವೃತ್ತಿಪರ ಕ್ರಿಕೆಟ್‍ಗೆ ಭರ್ಜರಿ ಶತಕದೊಂದಿಗೆ ಕಮ್ ಬ್ಯಾಕ್ ಮಾಡಿದ್ದಾರೆ. ಛತ್ತೀಸ್ ಗಢ್ ವಿರುದ್ಧ ಗ್ರೂಪ್ ಬಿ ರಣಜಿ ಟ್ರೋಫಿ ಪಂದ್ಯದಲ್ಲಿ ಪೃಥ್ವಿ ಶಾ ಭರ್ಜರಿ ಶತಕ ಸಿಡಿಸಿದ್ದಾರೆ.

ಮುಂಬೈ ತಂಡದ ಪರ ಆಡುವ 24 ವರ್ಷದ ಶಾ ಪ್ರಥಮ ಇನ್ನಿಂಗ್ಸ್ ನಲ್ಲಿ 185 ಎಸೆತಗಳಲ್ಲಿ 159 ರನ್ ಬಾರಿಸಿದರು. ಇದರಲ್ಲಿ ಅವರು 18 ಬೌಂಡರಿ ಮತ್ತು ಮೂರು ಸಿಕ್ಸರ್ ಚಚ್ಚಿದರು. ಶಾ ಅವರು ಊಟದ ವಿರಾಮದ ಶತಕದ ಗಡಿ ದಾಟಿದರು. ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯದ ಮೊದಲ ದಿನದಾಟದ ಆರಂಭಿಕ ಅವಧಿಯಲ್ಲಿ ಎರಡು ಶತಕಗಳನ್ನು ಗಳಿಸಿದ ಮೊದಲ ಭಾರತೀಯರಾದರು.

ಈ ಹಿಂದೆ ರಣಜಿ ಟ್ರೋಫಿ ಪಂದ್ಯವೊಂದರಲ್ಲಿ ಅವರು 383 ಎಸೆತಗಳಲ್ಲಿ 379 ರನ್ ಗಳಿಸುವ ವೇಳೆ ಅಸ್ಸಾಂ ವಿರುದ್ಧ ಇದೇ ರೀತಿಯ ಸಾಧನೆಯನ್ನು ಮಾಡಿದ್ದರು. ಇದು ಸಾರ್ವಕಾಲಿಕ ಎರಡನೇ ಅತಿ ಹೆಚ್ಚು ರಣಜಿ ಟ್ರೋಫಿ ಸ್ಕೋರ್ ಆಗಿತ್ತು. ಭೂಪೇನ್ ಲಾಲ್ವಾನಿ ಜೊತೆಗಿನ ಶಾ ಅವರ ಜೊತೆಯಾಟವು 244 ರನ್‍ಗಳ ಬೃಹತ್ ಆರಂಭಿಕ ಜೊತೆಯಾಟವನ್ನು ನಿರ್ಮಿಸಿತು.

ಲಾಲ್ವಾನಿ 238 ಎಸೆತಗಳಲ್ಲಿ 102 ರನ್ ಗಳ ಕೊಡುಗೆ ನೀಡಿದರು.41 ಬಾರಿ ರಣಜಿ ಚಾಂಪಿಯನ್ ಮುಂಬೈ ತಂಡವು ದಿನದಾಟ ಅಂತ್ಯಕ್ಕೆ ನಾಲ್ಕು ವಿಕೆಟ್ ನಷ್ಟಕ್ಕೆ 310 ರನ್ ಗಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು