LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಅಪಘಾತ ಪ್ರಮಾಣ ಇಳಿಕೆ- 21 ಬ್ಲಾಕ್ ಸ್ಪಾಟ್ ಗುರುತಿಸಿ ಸುರಕ್ಷತೆಗೆ ಕ್ರಮ, ನಗರದ ಫುಟ್ ಪಾತ್ ತೆರವಿಗೆ ಆದ್ಯತೆ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

ದಾವಣಗೆರೆ: ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಜೊತೆಗೆ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಒಟ್ಟು 21 ಅಪಾಯಕಾರಿ ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ಸದರಿ ಅಪಘಾತ ವಲಯಗಳನ್ನು ಅಪಫಾತ ಮುಕ್ತವಲಯವನ್ನಾಗಿಸಲು ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಒಂದು ಜೀವ ಉಳಿದರೂ ಅದು ನಮಗೆ ಹೆಮ್ಮೆ, ಕಳೆದ ಮೂರು ವರ್ಷಗಳ ಅಪಘಾತದ ದತ್ತಾಂಶಗಳನ್ನು ಪರಿಶೀಲಿಸಿ, ಎಲ್ಲಾ ಬ್ಲಾಕ್ ಸ್ಪಾಟ್‌ಗಳಲ್ಲಿ ಅಗತ್ಯ ಸುಧಾರಣೆ ತರಲು ವರದಿ ಸಿದ್ಧಪಡಿಸಲಾಗುವುದು, ಅಲ್ಲದೆ ಸುಪ್ರಿಂಕೋರ್ಟ್ನ ಆದೇಶದನ್ವಯ ನಗರದ ಆಕ್ರಮಿತ ಫುಟ್ ಪಾತ್ ಗಳನ್ನು ತೆರವುಗೊಳಿಸಲಾಗುವುದು ಎಂದರು.ಜಿಲ್ಲೆಯಲ್ಲಿ 2025 ನೇ ಸಾಲಿಗೆ ಹೋಲಿಸಿದರೆ ಪ್ರಸ್ತುತ ವರ್ಷದಲ್ಲಿ ಮಾರಣಾಂತಿಕ ಅಪಘಾತಗಳ ಸಂಖ್ಯೆ ಇಳಿಮುಖವಾಗಿದೆ. ಕಳೆದ ವರ್ಷ 146 ಮಾರಣಾಂತಿಕ ಅಪಘಾತಗಳು ವರದಿಯಾಗಿದ್ದರೆ, ಈ ಬಾರಿ ಈ ಸಂಖ್ಯೆ 139 ಕ್ಕೆ ಇಳಿದಿದ್ದು, ಒಟ್ಟು 7 ಅಪಘಾತಗಳು ಕಡಿಮೆಯಾಗಿವೆ. ಪೊಲೀಸ್ ಇಲಾಖೆಯ ನಿರಂತರ ಕಾರ್ಯಾಚರಣೆ, ಸ್ಪಾಟ್ ಫೈನ್, ಹೆಲ್ಮೆಟ್ ಕಡ್ಡಾಯ ಜಾರಿ ಮತ್ತು ಅಪ್ರಾಪ್ತ ವಯಸ್ಕರ ಚಾಲನೆಗೆ ತಡೆ ಇದಕ್ಕೆ ಪ್ರಮುಖ ಕಾರಣ ಎಂದರು. ಹೆದ್ದಾರಿ ದೀಪಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿಗೆ ವಿದ್ಯುತ್ ಸಂಪರ್ಕವನ್ನು ಯಾವುದೇ ವಿಳಂಬವಿಲ್ಲದೆ ತುರ್ತಾಗಿ ಒದಗಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಗಾಲ ಆರಂಭವಾಗಿರುವುದರಿAದ ರಸ್ತೆಗಳ ಮೇಲಿನ ಗುಂಡಿಗಳನ್ನು ತಕ್ಷಣ ಮುಚ್ಚಲು ಹಾಗೂ ಫ್ಲೋರೊಸೆಂಟ್ ವೈಟ್ ಪೇಂಟಿಂಗ್ (ಮಾರ್ಕಿಂಗ್) ಮಾಡಲು ಮಹಾನಗರ ಪಾಲಿಕೆ ಮತ್ತು ಸಂಬAಧಪಟ್ಟ ಇಲಾಖೆಗಳು ಕ್ರಮವಹಿಸುವಂತೆ ನಿರ್ದೇಶನ ನೀಡಿದರು.ಇತ್ತೀಚೆಗೆ ಕಿರಿದಾದ ಸೇತುವೆಯೊಂದರ ಮೇಲೆ ನಡೆದ ಅಪಘಾತದಲ್ಲಿ ಟ್ರ‍್ಯಾಕ್ಟರ್‌ಗೆ ಇನ್ಶೂರೆನ್ಸ್ ಹಾಗೂ ಚಾಲಕನಿಗೆ ಲೈಸೆನ್ಸ್ ಇಲ್ಲದಿರುವುದು ಕಂಡುಬAದಿದೆ, ಟ್ರ‍್ಯಾಕ್ಟರ್‌ಗಳನ್ನು ಇತರ ಉದ್ದೇಶಗಳಿಗೆ ಬಳಸುವುದು, ಕರ್ಕಶ ಶಬ್ದ ಮಾಡುವುದು, ಹಾಗೂ ಪರವಾನಗಿ ಇಲ್ಲದೆ ಚಾಲನೆ ಮಾಡುವವರ ವಿರುದ್ಧ ಆರ್.ಟಿ.ಓ ಅಧಿಕಾರಿಗಳು ವಿಶೇಷ ಜಾಗೃತಿ ಮತ್ತು ತಪಾಸಣಾ ಅಭಿಯಾನ ಹಮ್ಮಿಕೊಳ್ಳಬೇಕು ಹಾಗೂ ಬಿತ್ತನೆ ಚಟುವಟಿಕೆಗಳು ಆರಂಭವಾಗುತ್ತಿರುವುದರಿAದ ರಸ್ತೆಗಿಳಿಯುವ ಎಲ್ಲಾ ಟ್ರ‍್ಯಾಕ್ಟರ್ ಹಾಗೂ ಬಂಡಿಗಳ ಹಿಂಭಾಗದಲ್ಲಿ ಕಡ್ಡಾಯವಾಗಿ ರೇಡಿಯಂ ಸ್ಟಿಕ್ಕರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಕಳೆದ ತಿಂಗಳು ಶಾಲಾ ವಾಹನಗಳ ಚಾಲಕರ ತಪಾಸಣೆ ನಡೆಸಲಾಗಿದ್ದು, ಮದ್ಯ ಸೇವಿಸಿ ವಾಹನ ಚಾಲನೆ ಮಾಡುವ ಪ್ರಕರಣಗಳನ್ನು ಪತ್ತೆಹಚ್ಚಿ ದಂಡ ವಿಧಿಸಲಾಗಿತ್ತು. ಮುಂಬರುವ ದಿನಗಳಲ್ಲಿ ಆರ್.ಟಿ.ಓ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಶಾಲಾ ಬಸ್ಸುಗಳ ಫಿಟ್‌ನೆಸ್, ಮಿತಿಮೀರಿದ ಮಕ್ಕಳ ಸಾಗಣೆಯನ್ನು ನಿಯಂತ್ರಿಸಲು ಕ್ರಮವಹಿಸಬೇಕು, ಕೆ.ಎಸ್.ಆರ್.ಟಿ.ಸಿ , ಖಾಸಗಿ ಬಸ್ ಚಾಲಕರು ಹಾಗೂ ಶಾಲಾ ಬಸ್ ಚಾಲಕರಿಗೆ ಡಿಡಿಪಿಐ, ಡಿಡಿಪಿಯು ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಕುರಿತು ಕಾರ್ಯಾಗಾರ ಏರ್ಪಡಿಸಲು ಆರೋಗ್ಯ ಇಲಾಖೆಗೆ ಸೂಚಿಸಿದರು.ಸಾರ್ವಜನಿಕರು ಅಪಘಾತ ತಡೆಗೆ ರಸ್ತೆ ಉಬ್ಬುಗಳನ್ನು ನಿರ್ಮಿಸುವಂತೆ ಒತ್ತಾಯಿಸುತ್ತಿದ್ದರೂ, ಅವೈಜ್ಞಾನಿಕ ಹಂಪ್ಸ್ಗಳಿಂದಲೇ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ, ಸುಪ್ರೀಂಕೋರ್ಟ್ ಆದೇಶದ ಅನ್ವಯ ಅವೈಜ್ಞಾನಿಕ ಉಬ್ಬುಗಳನ್ನು ತೆರವುಗೊಳಿಸಬೇಕಿದ್ದು, ಬದಲಿಗೆ ವೈಜ್ಞಾನಿಕವಾಗಿ ರಂಬ್ಲರ್ ಸ್ಟ್ರಿಪ್ಸ್ ಅಳವಡಿಸಿ, ರಸ್ತೆಯ ಎರಡೂ ಬದಿಗಳಲ್ಲಿ ಕನಿಷ್ಠ 20 ರಿಂದ 50 ಮೀಟರ್ ದೂರದಲ್ಲೇ ಎಚ್ಚರಿಕೆ ಫಲಕಗಳನ್ನು ಅಳವಡಿಸಲು ಕ್ರಮವಹಿಸುವಂತೆ ಲೊಕೋಪಯೋಗಿ ಇಲಾಖೆಯ ಇಂಜಿನಿಯರ್ ರವರಿಗೆ ಸೂಚನೆ ನೀಡಿದರು.ಜಗಳೂರು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 50 ರ ದೊಣ್ಣೆಹಳ್ಳಿ ಬಳಿ ಇರುವ ಸಣ್ಣ ಸೇತುವೆ ಕಿರಿದಾಗಿದ್ದು, ಗ್ರಾಮೀಣ ಭಾಗದ ಲಿಂಕ್ ರಸ್ತೆಗಳಿಂದ ವಾಹನಗಳು ಅತಿ ವೇಗವಾಗಿ ಹೆದ್ದಾರಿ ಸೇರುವುದರಿಂದ ಇತ್ತೀಚೆಗೆ ಇಬ್ಬರು ಸಾವನ್ನಪ್ಪಿದ್ದರು. ಅಧಿಕಾರಿಗಳು ಪರಿಶೀಲಿಸಿ ಈ ಸ್ಥಳವನ್ನು ಅಪಘಾತ ವಲಯ ಎಂದು ಗುರುತಿಸಿದ್ದು, ರಸ್ತೆ ಅಗಲೀಕರಣ ಹಾಗೂ ಅಗತ್ಯ ಮಾರ್ಪಾಡುಗಳನ್ನು ಮಾಡಲು ಜಂಟಿ ಪರಿಶೀಲನೆ ನಡೆಸಲು ತೀರ್ಮಾನಿಸಿದ್ದಾರೆ ಎಂದರು. ರಾಷ್ಟ್ರೀಯ ಹೆದ್ದಾರಿ -48 ನಲ್ಲಿ ಬರುವ ಅಂಡರ್ ಪಾಸ್ ಸೇತುವೆಯು ಎಸ್.ಎಸ್ ಹೈ-ಟೆಕ್ ಆಸ್ಪತ್ರೆ , ರಾಮನಗರ ಸೇರಿದಂತೆ ಅನೇಕ ಹಳ್ಳಿಗಳಿಗೆ ಸಂಪರ್ಕವನ್ನು ಕಲ್ಪಿಸುವ ಅಂಡರ್ ಪಾಸ್ ಬಹಳ ಕಿರಿದಾಗಿದ್ದು ಅಂಬುಲೆನ್ಸ್ , ಲಾರಿ, ಬಸ್ ಗಳ ಓಡಾಟಕ್ಕೆ ಬಹಳ ದುಸ್ತರವಾಗಿರುತ್ತದೆ. ಈ ಅಂಡರ್ ಪಾಸ್ ಸೇತುವೆಯನ್ನು ಅಗಲೀಕರಣ ಮಾಡಲು ಕ್ರಮವಹಿಸುವಂತೆ ಎನ್.ಹೆಚ್.ಎ.ಐ ಅಧಿಕಾರಿಗಳಿಗೆ ಸೂಚನೆ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು