LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ಯುವನಿಧಿ ಯೋಜನೆಗೆ ನೋಂದಾಯಿಸಿ

ಬೆಂಗಳೂರು ನಗರ ಜಿಲ್ಲೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವಿಧರ ನಿರುದ್ಯೋಗಿಗಳ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದು.

ಪದವೀಧರ ಪಾಸಾದ ನಿರುದ್ಯೋಗ ಭತ್ಯೆ ಪ್ರತಿ ತಿಂಗಳು ರೂ. 3000 ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಯವರೆಗೆ ನೀಡಲಾಗುತ್ತದೆ.

ಪದವಿ/ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಬ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಆರ್ಹರಾಗುವುದಿಲ್ಲ.

ಆಸಕ್ತ ಅಭ್ಯರ್ಥಿಗಳು  www.sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800-599-9918 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು