LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ದೈವ" ಫೋಸ್ಟರ್ ಬಿಡುಗಡೆ

ಕಲ್ಪವೃಕ್ಷ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಜಯಮ್ಮ ಪದ್ಮರಾಜ್ ರವರ ಚೊಚ್ಚಲ ನಿರ್ಮಾಣದಲ್ಲಿ, ಮಂಜುನಾಥ್ ಜಯರಾಜ್ ತಮ್ಮ ಮೊದಲ ನಿರ್ದೇಶನದಲ್ಲಿ ತಾವೇ ನಾಯಕರಾಗಿ ಅಭಿನಯಿಸುತ್ತಿರುವ ಚಿತ್ರ "ದೈವ". ನಿರ್ದೇಶಕ ರವಿಶ್ರೀವತ್ಸ ರವರ ಬಳಿ ಸಹ ನಿರ್ದೇಶಕನಾಗಿ ಮಂಜುನಾಥ್ ಕೆಲಸ ಮಾಡಿರುವ ಅನುಭವವಿದ್ದು, ಈಗ ತಾವೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರೊಂದಿಗೆ ನಿರ್ದೇಶನಕ್ಕೆ ಮುಂದಾಗಿದ್ದಾರೆ.

"ದೈವ" ಚಿತ್ರದ ನಟ, ನಿರ್ದೇಶಕ ಮಂಜುನಾಥ್ ಜಯರಾಜ್ ರವರ ಜನ್ಮದಿನದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಶುಭ ಕೋರಿದೆ. ಈ ಚಿತ್ರದಲ್ಲಿ ನಾಯಕ ಒಂದು ಸಮುದಾಯದ ಪ್ರತಿನಿಧಿಯಾಗಿ ತನ್ನ ಸಮಾಜಕ್ಕಾಗಿ ವಿಭಿನ್ನ ಶೈಲಿಯಲ್ಲಿ ಹೋರಾಡುವಂತ ಕಥಾ ಹಂದರವಿದ್ದು, "ಕಾಂತಾರ" ಚಿತ್ರದ ನಂತರ ಕೆಲವು ಸಮುದಾಯಗಳ ದೇವರ ಆರಾಧನೆಯ ಚಿತ್ರಗಳು ಸೆಟ್ಟೇರುತ್ತಿರುವುದು ವಿಶೇಷ ಎನ್ನಬಹುದು.

"ದೈವ" ಚಿತ್ರದಲ್ಲಿ ಕಾಲಭೈರವನ ಆರಾಧಕನಾಗಿ ಜೋಗಯ್ಯನ ಪಾತ್ರದಲ್ಲಿ ನಾಯಕನಟ ಮಂಜುನಾಥ್ ಜಯರಾಜ್ ಎರಡು ಗೆಟಪ್ ಗಳಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಚಿತ್ರೀಕರಣ ಬಹುತೇಕ ಮುಗಿದಿದ್ದು ಶಿರಸಿ, ಮುಂಡಗೋಡು, ಯಲ್ಲಾಪುರ, ಗೋಕರ್ಣ ಸುತ್ತಮುತ್ತಾ ಚಿತ್ರೀಕರಣ ನಡೆದಿದೆ. ಚಿತ್ರತಂಡ ಚಿತ್ರೀಕರಣದ ಜೊತೆ ಜೊತೆಗೆ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಶುರುಮಾಡಿ ಕೊಂಡಿದ್ದು. ಇನ್ನು ಎರಡು ಹಾಡುಗಳ ಮತ್ತು ಮೂರು ಸಾಹಸ ಸನ್ನಿವೇಶಗಳ ಚಿತ್ರೀಕರಣ ಮುಗಿದರೆ, ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತದೆ.

ಚಿತ್ರಕ್ಕೆ ವಿಜೇತ್ ಮಂಜಯ್ಯ ರವರ ಸಂಗೀತವಿದೆ, ಹೆಚ್.ಆರ್. ಸಿದ್ದಾರ್ಥ್ ರವರ ಛಾಯಾಗ್ರಹಣದಲ್ಲಿ ಮೂಡಿಬರುತ್ತಿರುವ ಚಿತ್ರಕ್ಕೆ ಕೆ.ಎಂ. ಪ್ರಕಾಶ್ ರವರ ಸಂಕಲನವಿದೆ.ಬಾಲ ರಾಜ್ವಾಡಿ, ಸುರಭಿ, ನಿಶ್ಚಿತಶೆಟ್ಟಿ ಮುಂತಾದವರ ತಾರಗಣ "ದೈವ" ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು